Home Uncategorized Union Budget 2023: ಬಜೆಟ್​ ಸಿದ್ಧತೆ; ರಾಜ್ಯಗಳ ಹಣಕಾಸು ಸಚಿವರೊಂದಿಗೆ ನಿರ್ಮಲಾ ಸೀತಾರಾಮನ್ ಸಭೆ

Union Budget 2023: ಬಜೆಟ್​ ಸಿದ್ಧತೆ; ರಾಜ್ಯಗಳ ಹಣಕಾಸು ಸಚಿವರೊಂದಿಗೆ ನಿರ್ಮಲಾ ಸೀತಾರಾಮನ್ ಸಭೆ

3
0
bengaluru

ನವದೆಹಲಿ: 2023-24ನೇ ಸಾಲಿನ ಮುಂಗಡ ಪತ್ರಕ್ಕೆ (Budget 2023-24) ಸಿದ್ಧತೆ ಆರಂಭಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಶುಕ್ರವಾರ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರ ಜತೆ ಸಭೆ ನಡೆಸಿದರು. ಕೇಂದ್ರ ಹಣಕಾಸು ಇಲಾಖೆಯ ಸಹಾಯಕ ಸಚಿವರು, ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್, ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

ಎರವಲು ಮಿತಿಗಳನ್ನು ಹೆಚ್ಚಿಸುವುದು, ಕಂತುಗಳ ಪಾವತಿಗೆ ಎರಡು ಸುಧಾರಿತ ವಿಕೇಂದ್ರೀಕರಣ ವ್ಯವಸ್ಥೆ ಒದಗಿಸುವುದು ಮತ್ತು ಬಂಡವಾಳ ವೆಚ್ಚಕ್ಕಾಗಿ ವಿಶೇಷ ಸಹಾಯಗಳನ್ನು ಒದಗಿಸುವ ವಿಚಾರವಾಗಿ ಹೆಚ್ಚಿನ ಚರ್ಚೆ ನಡೆದವು ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಬಜೆಟ್ ಸಿದ್ಧತೆ ನಿಟ್ಟಿನಲ್ಲಿ ನಿರ್ಮಲಾ ಸೀತಾರಾಮನ್ ಮುಂದಿನ ದಿನಗಳಲ್ಲಿ ಹಲವು ಸುತ್ತಿನ ಸಭೆ ನಡೆಸಲಿದ್ದಾರೆ. ಈಗಾಗಲೇ ಅವರು ಕೈಗಾರಿಕೋದ್ಯಮಿಗಳು ಮತ್ತು ಹವಾಮಾನ ಬದಲಾವಣೆ ತಜ್ಞರ ಜತೆ ಸಭೆ ನಡೆಸಿದ್ದಾರೆ. ಕೃಷಿ, ಕೃಷಿ ಸಂಸ್ಕರಣಾ ಕೈಗಾರಿಕೆ, ಹಣಕಾಸು ಮತ್ತು ಬಂಡವಾಳ ಮಾರುಕಟ್ಟೆ ಪ್ರತಿನಿಧಿಗಳನ್ನು ಮಂಗಳವಾರ ಸಚಿವರು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಮುಂದಿನ ಕೆಲವು ವಾರಗಳಲ್ಲಿ ವಿವಿಧ ಕೈಗಾರಿಕೋದ್ಯಮಿಗಳು, ತಜ್ಞರು ಹಾಗೂ ಬಂಡವಾಳಗಾರರ ಜತೆ ಸಚಿವರು ಸಮಾಲೋಚನೆ ನಡೆಸಲಿದ್ದಾರೆ. ಮುಂದಿನ ವರ್ಷದ ಬಜೆಟ್ 2023ರ ಫೆಬ್ರುವರಿ 1ರಂದು ಸಂಸತ್​ನಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ.

ಬಜೆಟ್ ಮಂಡನೆ ಎಂಬುದೇ ಒಂದು ದೊಡ್ಡ ಪ್ರಕ್ರಿಯೆಯಾದರೆ ಅದಕ್ಕೆ ಸಿದ್ಧತೆಯೂ ಅದಕ್ಕಿಂತ ದೊಡ್ಡ ಮಟ್ಟದಲ್ಲಿ ನಡೆಯುತ್ತದೆ. ಸಾಮಾನ್ಯವಾಗಿ ಬಜೆಟ್ ಪ್ರತಿ ಸಿದ್ಧಪಡಿಸಲು ಮಂಡನೆಯ ದಿನಕ್ಕಿಂತಲೂ ಮೂರ್ನಾಲ್ಕು ತಿಂಗಳುಗಳ ಮೊದಲೇ ಪ್ರಕ್ರಿಯೆಗಳು ಆರಂಭವಾಗುತ್ತವೆ. ಅದರ ಮೊದಲ ಹಂತವೇ ಹಣಕಾಸು ಸಚಿವರು ವಿವಿಧ ಕ್ಷೇತ್ರಗಳ ತಜ್ಞರು, ಕೈಗಾರಿಕೋದ್ಯಮಿಗಳ ಜತೆ ಸಭೆ ನಡೆಸುವುದು. 2018ಕ್ಕಿಂತ ಹಿಂದಿನ ವರ್ಷಗಳಲ್ಲಿ ಕೇಂದ್ರ ಬಜೆಟ್ ಸಾಮಾನ್ಯವಾಗಿ ಫೆಬ್ರುವರಿ ತಿಂಗಳ ಕೊನೆಯಲ್ಲಿ ಮಂಡನೆಯಾಗುತ್ತಿತ್ತು. 2018ರ ನಂತರ ಫೆಬ್ರುವರಿ ಮೊದಲ ದಿನವೇ ಮಂಡನೆ ಮಾಡಲಾಗುತ್ತಿದೆ. ರೈಲ್ವೆ ಬಜೆಟ್ ಅನ್ನೂ ಸಹ ಕೆಲವು ವರ್ಷಗಳಿಂದ ಕೇಂದ್ರ ಬಜೆಟ್​ನೊಂದಿಗೆ ವಿಲೀನಗೊಳಿಸಲಾಗಿದೆ. 2023ರ ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಅವರು ಮಂಡಿಸುವುದೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿರಲಿದೆ. ಯಾಕೆಂದರೆ, 2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಸಾಮಾನ್ಯವಾಗಿ ಚುನಾವಣೆ ವರ್ಷದಲ್ಲಿ ಹಾಲಿ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವುದಿಲ್ಲ. ಚುನಾವಣೆ ನಂತರ ಆಯ್ಕೆಯಾಗಿ ರಚಿಸಲ್ಪಟ್ಟ ಹೊಸ ಸರ್ಕಾರ ಬಜೆಟ್​ನಲ್ಲಿ ಬದಲಾವಣೆ ಮಾಡಿಕೊಳ್ಳಲು ಮುಕ್ತವಾಗಿದೆ.

bengaluru

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

bengaluru

LEAVE A REPLY

Please enter your comment!
Please enter your name here