ನವದೆಹಲಿ:
ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಬರುವ ವರ್ಷದ ಬಜೆಟ್ ಸಿದ್ಧತೆಗೆ ಕೇಂದ್ರ ಹಣಕಾಸು ಸಚಿವಾಲಯ ಪ್ರಕ್ರಿಯೆ ಆರಂಭಿಸಿದೆ.
ವಿವಿಧ ವರ್ಗಗಳು, ವಲಯಗಳು, ಜನ ಸಾಮಾನ್ಯರಿಂದ ಸಲಹೆಗಳನ್ನು ಆಹ್ವಾನಿಸಿದ್ದು, ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳುವುದಾಗಿ ತಿಳಿಸಿದೆ.
ಬಜೆಟ್ ನಲ್ಲಿ ಸೇರಿಸಬೇಕಾದ ಅಂಶಗಳು, ಕಾರ್ಯಕ್ರಮಗಳ ಕುರಿತ ಪ್ರಸ್ತಾವನೆಗಳನ್ನು mygov.in ಪೋರ್ಟಲ್ ನಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಭಾನುವಾರ ಇದೇ ಉದ್ದೇಶಕ್ಕಾಗಿ ಆನ್ ಲೈನ್ ಮೂಲಕ ನೇರ ಪ್ರಸಾರ ಆಯೋಜಿಸಲಾಗಿತ್ತು.
ಈ ತಿಂಗಳ 30 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದು, ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.