ಬೆಂಗಳೂರು:
ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಇಲ್ಲಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿದರು.
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ @nsitharaman ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದರು.
— BJP Karnataka (@BJP4Karnataka) February 21, 2021
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಗೀತಾ ವಿವೇಕಾನಂದ, ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಶ್ರೀ @NswamyChalavadi, ರಾಜ್ಯ ಮಾಧ್ಯಮ ಸಂಚಾಲಕ ಶ್ರೀ @gkkhasle ಉಪಸ್ಥಿತರಿದ್ದರು. pic.twitter.com/M8AxZjgKjR
ಈ ಸಂದರ್ಭದಲ್ಲಿ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪಕ್ಷದ ರಾಜ್ಯ ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದ, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಕೆ.ಎಸ್.ನವೀನ್, ಕುಡಚಿ ಶಾಸಕರಾದ ಶ್ರೀ ಪಿ.ರಾಜೀವ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಲೋಕೇಶ್ ಅಂಬೆಕಲ್ಲು, ರಾಜ್ಯ ಮಾಧ್ಯಮ ವಿಭಾಗದ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಪಕ್ಷದ ಪದಾಧಿಕಾರಿಗಳು ಅವರು ಭಾಗವಹಿಸಿದ್ದರು.