ನವ ದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆ (Citizenship Amendment Act) ನಿಯಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಸೋಮವಾರ ಅಧಿಸೂಚನೆ ಪ್ರಕಟಿಸಿದೆ. ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರವು ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಮುಂದಾಗಿದೆ.
2019ರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು, ಧರ್ಮಾಧಾರಿತವಾಗಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಅನುಮೋದನೆಯಾದಾಗ, ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಬಿಜೆಪಿಯೇತರ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ತೀವ್ರ ಸ್ವರೂಪ ಪಡೆದಿತ್ತು. ಪ್ರತಿಭಟನೆಯಲ್ಲಿ ಕನಿಷ್ಠ 100 ಮಂದಿ ಪ್ರಾಣ ಕಳೆದುಕೊಂಡಿದ್ದರು.
The applications will be submitted in a completely online mode for which a web portal has been provided. (2/2)@HMOIndia @PIB_India @DDNewslive @airnewsalerts
— Spokesperson, Ministry of Home Affairs (@PIBHomeAffairs) March 11, 2024
ಈ ಕಾನೂನಿನಂತೆ ಡಿಸೆಂಬರ್ 31, 2014ಕ್ಕಿಂತ ಮುಂಚೆ ಭಾರತಕ್ಕೆ ವಲಸೆ ಬಂದಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಗಾನಿಸ್ತಾನದ ಹಿಂದೂ ಸಿಖ್, ಜೈನ, ಕ್ರೈಸ್ತ, ಬೌದ್ಧ ಮತ್ತು ಪಾರ್ಸಿ ಸಮುದಾಯದ ಮಂದಿಗೆ ಭಾರತದ ಪೌರತ್ವ ನೀಡಬಹುದಾಗಿದೆ.