ಬೆಂಗಳೂರು:
ವಿವಿಧ ಕಾರ್ಯಕ್ರಮಗಳ ನಿಮಿತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಿದ್ದು, ಎಚ್ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿದ್ದು, ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್ (ಹೆಚ್ ಎಎಲ್) ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾರನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.
ಅಮಿತ್ ಶಾ ಅವರು ನಾಳೆ ಬೆಳಗ್ಗೆ ಮಾದಕ ವಸ್ತು ಕಳ್ಳಸಾಗಣೆ ಮತ್ತು ದಕ್ಷಿಣ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ರಾಷ್ಟ್ರೀಯ ಭದ್ರತೆ ಕುರಿತ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೂ ಮೊದಲು ಬೆಳಗ್ಗಿನ ಉಪಹಾರಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಲಿರುವ ಅಮಿತ್ ಶಾ ಅಲ್ಲಿ ಬಿಜೆಪಿ ಹಿರಿಯ ನಾಯಕರೊಂದಿಗೆ ಉಪಾಹಾರ ಸೇವಿಸಲಿದ್ದಾರೆ.
ಅಮಿತ್ ಶಾ ಅವರನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಪಹಾರಕ್ಕೆ ಆಹ್ವಾನಿಸಿದ್ದು, ಬಿಎಸ್ ವೈ ಸರ್ಕಾರಿ ನಿವಾಸ ಕಾವೇರಿಗೆ ಬೆಳೆಗ್ಗೆ 9.30 ಕ್ಕೆ ಆಗಮಿಸಲಿದ್ದಾರೆ. ಶಾ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡಾ ಇರಲಿದ್ದಾರೆ. ಈ ವೇಳೆ ಸದ್ಯದ ರಾಜಕೀಯ ಬೆಳವಣಿಗೆ ಹಾಗೂ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಯೂ ಇದೆ. ಬಳಿಕ ದಕ್ಷಿಣ ರಾಜ್ಯಗಳು/ ಕೇಂದ್ರಾಅಡಳಿತ ಪ್ರದೇಶಗಳಿಗೆ ಮಾಕವಸ್ತು ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ವಿಷಯದ ಕುರಿತ ವಿಚಾರ ಸಂಕಿರಣದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
ಅಮಿತ್ ಶಾ ಅವರು ಬೆಂಗಳೂರಿನ ಕಮ್ಮಘಟ್ಟ ಗ್ರಾಮದಲ್ಲಿ ಶೇಖರ್ ಸಮೃದ್ಧಿ ಸೌಧದ ಶಂಕುಸ್ಥಾಪನೆ ನೆರವೇರಿಸಲಿದ್ದು, ಸಹಕಾರ ಸಚಿವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಚುನಾವಣೆ ಸನಿಹದಲ್ಲಿರುವುದರಿಂದ ಅಮಿತ್ ಶಾ ಅವರು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದು, ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ವಿಧಾನಸೌಧದಲ್ಲಿ ಮೂರು ಪ್ರತಿಮೆ ಲೋಕಾರ್ಪಣೆ ಮಾರ್ಚ್ 24 ರಂದು ವಿಧಾನಸೌಧದ ಮುಂಭಾಗದಲ್ಲಿ ಕೆಂಪೇಗೌಡ (ಬೆಂಗಳೂರು ಸಂಸ್ಥಾಪಕ) ಮತ್ತು ಬಸವೇಶ್ವರ (ಲಿಂಗಾಯತ ಸಮಾಜ ಸುಧಾರಕ) ಸೇರಿದಂತೆ ಮೂರು ಪ್ರತಿಮೆಗಳನ್ನು ಅಮಿತ್ ಶಾ ಅನಾವರಣಗೊಳಿಸಲಿದ್ದಾರೆ. ಈ ವಿಷಯವನ್ನು ಇಂದು ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಖಚಿತಪಡಿಸಿದ್ದಾರೆ. ಮಾರ್ಚ್ 24 ಮತ್ತು 26 ರಂದು ಅಮಿತ್ ಶಾ ಕರ್ನಾಟಕದಲ್ಲಿ ಇರಲಿದ್ದಾರೆ. ಮಾರ್ಚ್ 25 ರಂದು ಪ್ರಧಾನಿ ನರೇಂದ್ರ ಮೋದಿ ಕೂಡ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ರಾಜ್ಯದ ವಿವಿಧೆಡೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 25ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ವೈಟ್‌ಫೀಲ್ಡ್ ಮೆಟ್ರೋ ಹಳಿಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ದಾವಣಗೆರೆಗೆ ಭೇಟಿ ನೀಡಲಿದ್ದು, ಬಿಜೆಪಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 6.30 ಕ್ಕೆ ವಿಧಾನಸೌಧ ಮುಂಭಾಗ ಬಸವೇಶ್ವರ ಮತ್ತು ಕೆಂಪೇಗೌಡ ಪ್ರತಿಮೆ ಉದ್ಘಾಟನೆ ಹಾಗೂ ಬೆಂಗಳೂರು ಹಬ್ಬ ಉದ್ಘಾಟನೆಯನ್ನು ಶಾ ನೆರವೇರಿಸಲಿದ್ದಾರೆ. ರಾತ್ರಿ 8.30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಿದ್ದಾರೆ. 26 ರಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಷಾ ವಾಸ್ತವ್ಯ ಹೂಡಲಿದ್ದು, 27 ರಂದು ಬೆಳಗ್ಗೆ 9 ಗಂಟೆಗೆ ದೆಹಲಿಗೆ ವಾಪಸ್ ಆಗಲಿದ್ದಾರೆ.
ರಾಜ್ಯ ಪ್ರವಾಸ ಮಾರ್ಚ್ 25 ರಂದು ಮತ್ತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೀದರ್, ರಾಯಚೂರು ಮತ್ತು ಬೆಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. 25 ರಂದು ರಾತ್ರಿ 7.20 ಕ್ಕೆ ಬೀದರ್ ಗೆ ಶಾ ಆಗಮಿಸಲಿದ್ದು, 25 ರಂದು ರಾತ್ರಿ ಬೀದರ್ ಏರ್ ಪೋರ್ಸ್ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. 26 ರಂದು ಬೆಳಗ್ಗೆ 10.30 ಕ್ಕೆ ಬೀದರ್ ಜಿಲ್ಲೆಯ ಗೊರಟಾ ಗ್ರಾಮದಲ್ಲಿ 103 ಅಡಿ ಎತ್ತರದ ರಾಷ್ಟ್ರ ಧ್ವಜಾರೋಹಣ, ಗೊರಟಾ ಹುತಾತ್ಮ ಸ್ಮಾರಕ ಮತ್ತು ಸರ್ದಾರ್ ವಲ್ಲಭಭಾಯ್ ಪಟೇಲ್ ಸ್ಮಾರಕ ಉದ್ಘಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರಿನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಷಾ, ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಗುಜರಾತ್ ಸಮಾಜದ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಈ ಸಮಾರಂಭ ನಡೆಯಲಿದೆ.
ಅಮಿತ್ ಶಾ ಕಾರ್ಯಕ್ರಮದ ಸಂಕ್ಷಿಪ್ತ ವಿವರ
1.ಗುರುವಾರ ರಾತ್ರಿ 10.40ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಅಮಿತ್ ಶಾ ಆಗಮನ.
2.ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ.
3.24 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗಿ.
4.ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ರಾಷ್ಟ್ರೀಯ ಭದ್ರತೆ ಕುರಿತ ದಕ್ಷಿಣ ರಾಜ್ಯಗಳ ಸಮ್ಮೇಳನ.
5.ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಮ್ಮೇಳನ.
6.ಮಧ್ಯಾಹ್ನ 2 ಗಂಟೆಯಿಂದ 3 ಗಂಟೆಯವರೆಗೆ ಸಹಕಾರ ಸಮೃದ್ಧಿ ಸೌಧಕ್ಕೆ ಶಂಕುಸ್ಥಾಪನೆ ಮತ್ತು ಸಹಕಾರ ಇಲಾಖೆಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ.
7.ಬೆಂಗಳೂರಿನ ಕೊಮ್ಮಘಟ್ಟದಲ್ಲಿ ನಡೆಯಲಿರುವ ಸಮಾರಂಭ.
8.ಮಧ್ಯಾಹ್ನ 3.30 ಕ್ಕೆ ಬೆಂಗಳೂರಿನಿಂದ ನಿರ್ಗಮಿಸಲಿರುವ ಅಮಿತ್ ಶಾ.