ಚಿಕ್ಕಬಳ್ಳಾಪುರ:
ತಾಲ್ಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಅವರು ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.
ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಲು ಆಗಮಿಸರುವ ಕೇಂದ್ರ ಗೃಹ ಸಚಿವ ಶ್ರೀ @AmitShah ಅವರನ್ನು ಆದರದಿಂದ ಬರಮಾಡಿಕೊಳ್ಳಲಾಯಿತು.#KarnatakaWelcomesAmitShah pic.twitter.com/Ts6gMY0Ry5
— Dr Sudhakar K (@mla_sudhakar) April 1, 2022
ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಟಿ.ಬಿ.ನಾಗರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.