ಬೆಂಗಳೂರು:
ದ್ವಿಪಥವಿರುವ ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ.
ಎನ್.ಹೆಚ್.ಎ.ಐ ವತಿಯಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡು 2 ವರ್ಷಗಳ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
Thank you @nitin_gadkari ji for approving the upgradation of the 2 lane road at Shiradi Ghat to 4 lanes at a cost of Rs 1200 crore.
— Basavaraj S Bommai (@BSBommai) January 20, 2022
We have assured all our support to the same and look forward to the completion of this road,
1/2@narendramodi @PMOIndia @CMofKarnataka
ರಾಜ್ಯ ಸರ್ಕಾರವು ಅಗತ್ಯವಿರುವ ಎಲ್ಲಾ ಸಹಕಾರ ಹಾಗೂ ಅನುಮೋದನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಶಿರಾಡಿ ಘಾಟ್ ಹೆದ್ದಾರಿಯನ್ನು ತಕ್ಷಣ ಮೇಲ್ದರ್ಜೆಗೇರಿಸಬೇಕಾಗಿದೆ. ಮಳೆಗಾಲದ ಸಮಯದಲ್ಲಿ ಈ ರಸ್ತೆ ಬಳಕೆ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಈ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
Also Read: Union minister approves Rs1200cr Shiradi Ghat road upgradation to four-lane highway
ಬೆಂಗಳೂರು ಮತ್ತು ಮಂಗಳೂರಿನ ಸಂಪೂರ್ಣ ಮಾರ್ಗ ಏಕರೀತಿಯ ಚತುಷ್ಪಥ ರಸ್ತೆಯಾಗಲಿದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಸುಸ್ಥಿರ ರೀತಿಯಲ್ಲಿ ಎನ್.ಹೆಚ್ 75 ನ್ನು ಚತುಷ್ಪಥವಾಗಿಸುವ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಗೊಳಿಸಬಹುದಾಗಿದೆ
ಶಿರಾಡಿ ಘಾಟ್ ಮೂಲಕ ಷಟ್ಪಥ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ಎನ್.ಹೆಚ್. ಎ. ಐ. ಗೆ ಕೇಂದ್ರ ಸಚಿವರು ಸೂಚಿದ್ದಾರೆ.