Home ಮಂಡ್ಯ ರೈತರ ಆದಾಯ ದ್ವಿಗುಣಗೊಳಿಸಲು ಶ್ರಮ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರೈತರ ಆದಾಯ ದ್ವಿಗುಣಗೊಳಿಸಲು ಶ್ರಮ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

36
0
Union Minister Shobha Karandlaje assures to double the income of farmers
Advertisement
bengaluru

ಮಂಡ್ಯ/ಬೆಂಗಳೂರು:

ರೈತರ ಆದಾಯ ದ್ವಿಗುಣಗೊಳಿಸಲು ಪ್ರಧಾನಿಯವರು ಶ್ರಮಿಸುತ್ತಿದ್ದು, ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆ ಯೋಜನೆಗಳನ್ನು ಕೊನೆಯ ರೈತರ ತನಕ ತಲುಪಿಸಲು ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಅವರ ನೇತೃತ್ವದಲ್ಲಿ ಶ್ರಮಿಸುವುದಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದರು

ಮಂಡ್ಯದಲ್ಲಿ ಇಂದು ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾದ್ಯ ತೈಲ, ಎಣ್ಣೆಯಲ್ಲಿ ನಾವು ಸ್ವಾವಲಂಬನೆ ಸಾಧಿಸಬೇಕಿದೆ. ಶೇ 70 ಖಾದ್ಯ ತೈಲ ಬೇರೆ ದೇಶಗಳಿಂದ ಬರುತ್ತಿದೆ. ಟ್ರ್ಯಾಕ್ಟರ್, ಟಿಲ್ಲರ್ ಸಬ್ಸಿಡಿಯಲ್ಲಿ ನೀಡುವುದು, ಬಾಡಿಗೆಯಲ್ಲಿ ಯಂತ್ರೋಪಕರಣ ಒದಗಿಸುವುದು, ಕೃಷಿ ಸಿಂಚಾಯಿ ಯೋಜನೆಗೆ ವಿಶೇಷವಾದ ಅನುಕೂಲತೆ, ರಸಗೊಬ್ಬರಕ್ಕೆ ಸಬ್ಸಿಡಿ, ಖಾದ್ಯ ತೈಲವನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಮೂಲಕ ಸ್ವಾವಲಂಬಿತನ ಸಾಧಿಸಲಾಗುವುದು ಎಂದು ನುಡಿದರು.

ರಾಜ್ಯದಲ್ಲಿ ನಾಲ್ಕು ಸಚಿವರು ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಹಳ ಅದ್ಭುತವಾದ ಸ್ವಾಗತವನ್ನು ಮಂಡ್ಯ ಮತ್ತು ಮದ್ದೂರಿನ ಜನರು ನನಗೆ ನೀಡಿದ್ದಾರೆ ಎಂದು ವಿವರಿಸಿದರು.

bengaluru bengaluru

ದೇಶದಾದ್ಯಂತ ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ ಆರಂಭವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಸಮುದಾಯ, ಮಹಿಳೆಯರಿಗೆ ಶ್ರೀ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟದಲ್ಲಿ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದರು. ಅತ್ಯಂತ ಹಿಂದುಳಿದ ಪ್ರದೇಶದ ರೈತನ ಮಗಳಾದ ತಮಗೆ ಸಚಿವ ಸ್ಥಾನ ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು.

ಮಂಡ್ಯದ ಸಕ್ಕರೆ- ಬೆಲ್ಲ ರಫ್ತು ಮಾಡಲು ಉತ್ತೇಜನ ಕೊಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಹಲವಾರು ದೇಶಗಳಲ್ಲಿ ಆಹಾರದ ಕೊರತೆ ಕಾಡಿತ್ತು. ಆದರೆ, ಭಾರತವು ಆಹಾರದ ಸಮಸ್ಯೆ ಎಸುರಿಸಲಿಲ್ಲ. ರೈತರ ಪರಿಶ್ರಮದ ಪರಿಣಾಮವಾಗಿ ಭಾರತದ ಎಲ್ಲರಿಗೂ ಆಹಾರ ಸಮಸ್ಯೆ ಕಾಡಲಿಲ್ಲ. ಎಲ್ಲರಿಗೂ ಆಹಾರ ಲಭಿಸಿದೆ ಎಂದು ವಿಶ್ಲೇಷಿಸಿದರು.

ರೈತರಿಗೆ ಹೆಚ್ಚು ಅನುಕೂಲ ಮಾಡುವ ಸಂಕಲ್ಪ ಕೇಂದ್ರದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರದ್ದಾಗಿದೆ. 1,23,000 ಕೋಟಿ ರೂಪಾಯಿಯನ್ನು ಕೃಷಿ ಇಲಾಖೆಗೆ ಈ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾಗಿದೆ. ಸಂಶೋಧನೆ ಮತ್ತು ಶಿಕ್ಷಣಕ್ಕೆ 8,500 ಕೋಟಿ ರೂಪಾಯಿ ನೀಡಿದ್ದಾರೆ. ಇದು ರೈತರನ್ನು ಸಮರ್ಪಕವಾಗಿ ತಲುಪಲು ಪ್ರಯತ್ನಿಸುವುದಾಗಿ ತಿಳಿಸಿದರು.

ರೈತರ ಉನ್ನತಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಜೊತೆಗೂಡಿ ಕೆಲಸ ಮಾಡುವುದಾಗಿ ಅವರು ತಿಳಿಸಿದರು. ಮಹಿಳೆಯರ ಜೊತೆ ಗದ್ದೆ ನಾಟಿ ಮಾಡಿದರು. ಪಡಿತರ ಕೇಂದ್ರಕ್ಕೂ ಭೇಟಿ ನೀಡಿ ಪಡಿತರ ಸಕಾಲದಲ್ಲಿ ಲಭಿಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು.

ರಾಜ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ನಾರಾಯಣ ಗೌಡ, ಶಾಸಕರಾದ ಶ್ರೀ ಎಲ್.ನಾಗೇಂದ್ರ,. ವಿಭಾಗ ಪ್ರಭಾರಿಗಳಾದ ಶ್ರೀ ಮೈ.ವಿ.ರವಿಶಂಕರ್, ಜಿಲ್ಲಾ ಅಧ್ಯಕ್ಷರಾದ ಶ್ರೀ ಕೆ. ಜೆ. ವಿಜಯ ಕುಮಾರ್, ಮುಖಂಡರಾದ ಶ್ರೀ ಎ. ಮಂಜು. ಡಾ|| ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


bengaluru

LEAVE A REPLY

Please enter your comment!
Please enter your name here