•ವಿಶ್ವದ ಲೀಥಿಯಮ್ ಇಯಾನ್ ಬ್ಯಾಟರಿ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿ
•ಸುಮಾರು 4 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ಹೂಡಿಕೆ
•4 ಸಾವಿರ ಉದ್ಯೋಗಾವಕಾಶಗಳ ಸೃಷ್ಟಿ
ಬೆಂಗಳೂರು:
ಲಿಥಿಯನ್ -ಅಯಾನ್ ಸೆಲ್ ಉತ್ಪಾದನಾ ಕ್ಷೇತ್ರದ ಪ್ರಮುಖ ಕಂಪನಿಯಾಗಿರುವ ಅಮೇರಿಕಾದ ಸಿ4ವಿ ಇಂದು ರಾಜ್ಯದಲ್ಲಿ 4 ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಮಾಡಲು ಮುಂದಾಗಿರುವುದು, ರಾಜ್ಯದ ಎಲೆಕ್ಟ್ರಿಕ್ ಸೆಲ್ ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ವಿಶ್ವದ ಪ್ರಮುಖ ಲಿಥಿಯನ್ -ಅಯಾನ್ ಸೆಲ್ (Li-Ion) ಸೆಲ್ ಉತ್ಪಾದನಾ ಕಂಪನಿಯ ಪ್ರತಿನಿಧಿಗಳೊಂದಿಗೆ ಒಡಂಬಡಿಕೆಯ ನಂತರ ಮಾತನಾಡಿದ ಅವರು, ಸಿ4ವಿ ಕಂಪನಿ ನೂರಕ್ಕೂ ಹೆಚ್ಚು ಪೇಟೆಂಟ್ ಗಳನ್ನು ಹೊಂದಿರುವ ಹಾಗೂ ಲಿಥೀಯಮ್ ಬ್ಯಾಟರಿ ಸೆಲ್ ಉತ್ಪಾದನೆ ಹಾಗೂ ತಂತ್ರಜ್ಞಾನ ಹೊಂದಿರುವ ಪ್ರಮುಖ ಕಂಫನಿಯಾಗಿದೆ. ರಾಜ್ಯದಲ್ಲಿ ಈ ಕಂಪನಿಯ 4015 ಕೋಟಿ ರೂಪಾಯಿಗಳ ಹೂಡಿಕೆಯಿಂದಾಗಿ ಸುಮಾರು 4 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದರು.
ಕಂಪನಿ ರಾಜ್ಯದಲ್ಲಿ 5 GWh ಪ್ಲಾಂಟನ್ನು ಸ್ಥಾಪಿಸಲಿದ್ದು, ಮುಂದಿನ ವರ್ಷ ಇದರ ಕಾಮಗಾರಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿ ಇತ್ತೀಚಿಗೆ ಹೊರತಂದಿರುವ ನೂತನ ಇಎಸ್‌ಡಿಎಂ ನೀತಿ ಹಾಗೂ ಎಲೆಕ್ಟ್ರಿಕ್ ವೆಹಿಕಲ್ ನೀತಿಯಲ್ಲಿನ ಅಮೂಲಾಗ್ರ ಬದಲಾವಣೆಯ ಮೂಲಕ ಹಸಿರು ಭವಿಷ್ಯಕ್ಕೆ ಮುನ್ನಡಿಯನ್ನು ಬರೆದಿದ್ದೇವೆ. ಪರಿಸರ ಮಾಲಿನ್ಯ ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೆಲ್ ಉತ್ಪಾದನಾ ಕ್ಷೇತ್ರ ಪ್ರಮುಖ ಪಾತ್ರವಹಿಸಲಿದೆ. ಈ ನಿಟ್ಟಿನಲ್ಲಿ ಕ್ಷೇತ್ರಕ್ಕೆ ಅಗತ್ಯವಿರುವ ಸಹಕಾರ ರಾಜ್ಯ ಸರಕಾರದಿಂದ ಈಗಾಗಲೇ ನೀಡಲಾಗುತ್ತಿದೆ. ಪ್ರಮುಖ ಕಂಪನಿ ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವುದರಿಂದ ಇನ್ನಷ್ಟು ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಸಾಧ್ಯವಾಗಲಿದೆ. ರಾಜ್ಯದಲ್ಲಿ ಕೈಗಾರಿಕೆಯ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರಗಳನ್ನು ನಮ್ಮ ಸರಕಾರ ನೀಡಲು ಸಿದ್ದವಿದೆ ಎಂದು ಇದೇ ಸಂಧರ್ಭದಲ್ಲಿ ಭರವಸೆ ನೀಡಿದರು.
Signed an MoU with C4V company for an investment worth
— Jagadish Shettar (@JagadishShettar) July 1, 2021
Rs.4000 crores.
C4V is one of the world's leading producer of Lithium – Ion cells.
The proposed investment will create more than 4000 jobs in the state.#IndusrialPolicy2020to25 | #BeyondBengaluruInitiative pic.twitter.com/Aa8oaxK3pI
ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ರಾಜ್ ಕುಮಾರ್ ಖತ್ರಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಸಿ4ವಿ ಕಂಪನಿಯ ಸಿಇಓ ಶೈಲೇಶ್ ಉಪ್ರೇತಿ, ಉಪಾಧ್ಯಕ್ಷ ಕುಲದೀಪ್ ಗುಪ್ತಾ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ, ಇನ್‌ವೆಸ್ಟ್ ಕರ್ನಾಟಕ ಫೋರಂ ನ ಸಿಓಓ ಬಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದರು.