Home ಆರೋಗ್ಯ ಡಿಸೆಂಬರ್‌ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಖಚಿತ; ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಡಿಸೆಂಬರ್‌ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಖಚಿತ; ಡಾ.ಸಿ.ಎನ್.‌ಅಶ್ವತ್ಥನಾರಾಯಣ

140
0

ಬೆಂಗಳೂರು:

19 ತಡೆಯುವ ಲಸಿಕೆ ಕುರಿತು ನಡೆಯುತ್ತಿರುವ ರಾಜಕೀಯ ಮೇಲಾಟ ಅತ್ಯಂತ ದುರದೃಷ್ಟಕರ. ಆದರೆ, ಡಿಸೆಂಬರ್‌ ಒಳಗಾಗಿ 18 ವರ್ಷ ಮೇಲ್ಪಟ್ಟ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

ಅಡ್ವೊಕೇಟ್ಸ್ ಫಾರ್ ʼಗ್ರೀನ್‌ ಅರ್ಥ್‌ʼ ಸ್ವಯಂ ಸೇವಾ ಸಂಸ್ಥೆಯು ಬಿಬಿಎಂಪಿ ಜತೆ ಸೇರಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಬುಧವಾರ ಆಯೋಜಿಸಿದ್ದ ವಕೀಲರ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

DCM advocates vaccination drive

ಕೋವಿಡ್‌ ಮಾರಿಯನ್ನು ತಡೆಯಲು ಇರುವ ಏಕೈಕ ಪರಿಹಾರ ಲಸಿಕೆ. ಆದರೆ, ಇದರ ಬಗ್ಗೆ ಸಾಕಷ್ಟು ರಾಜಕೀಯ ನಡೆಯುತ್ತಿದೆಲ. ಜಾಗತಿಕವಾಗಿ ನಡೆದ ಷಡ್ಯಂತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಪರಿಣಾಮಕಾರಿಯಾಗಿ ಎದುರಿಸಿದರು. ಅದೇ ರೀತಿ ನಮ್ಮ ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ತಂತ್ರಗಳಿಗೆ ರಾಜ್ಯ ಸರ್ಕಾರ ತಿರುಗೇಟು ಕೊಟ್ಟಿದೆ ಎಂದರು.

ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಲಸಿಕೆಯ ಸಂಶೋಧನೆ, ತಯಾರಿಕೆ ಮತ್ತು ಲಸಿಕೀಕರಣ ಅತ್ಯಂತ ವೇಗವಾಗಿ ಆಗಿದೆ. ಇದನ್ನು ಪ್ರತಿಯೊಬ್ಬರೂ ಗುರುತಿಸಬೇಕು ಎಂದು ಹೇಳಿದರು.

ಪ್ರತಿಯೊಬ್ಬರೂ ಲಸಿಕೆಯನ್ನು ತಪ್ಪದೇ ಪಡೆಯಬೇಕು. ಜತೆಗೆ, ಕುಟುಂಬದವರಿಗೂ ಕೊಡಿಸಬೇಕು ಹಾಗೂ ಸುತ್ತಮುತ್ತಲಿನ ಜನರು ಪಡೆಯುವಂತೆ ಪ್ರೋತ್ಸಾಹ ನೀಡಬೇಕು ಎಂದು ಡಿಸಿಎಂ ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಪಿ.ಸಿ.ಮೋಹನ್‌, ಹಿರಿಯ ವಕೀಲ ವಿವೇಕ್‌ ರೆಡ್ಡಿ, ರಾಜ್ಯದ ಸಾಲಿಸಿಟರ್‌ ಜನರಲ್‌ ನರಗುಂದ್‌, ಬಾರ್‌ ಕೌನ್ಸಿಲ್‌ ಅಧ್ಯಕ್ಷ ಶ್ರೀನಿವಾಸ ಬಾಬು ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here