ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ತನಿಖೆಯನ್ನು ಸಿಬಿಐಗೆ ನೀಡುವಂತೆ ನಿರ್ದೇಶನ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.
ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದಿಲ್ಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.