ಬೆಂಗಳೂರು:
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ತೆರೆಸಿದರು.
ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು.
ಜನರ ಬಗ್ಗೆ ಕಾಳಜಿ,
— Siddaramaiah (@siddaramaiah) June 24, 2023
ನಡತೆಯಲ್ಲಿ ಪ್ರಾಮಾಣಿಕತೆ,
ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ.
ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ,
ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ.
ಕೊಠಡಿಯೊಳಗೆ ಒಳ್ಳೆಯ… pic.twitter.com/40gAY6HgkY
ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.
ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.