ಸಹಕಾರ ಸಂಘಗಳ ನಿಬಂಧಕರಾಗಿ ಡಾ. ವೆಂಕಟೇಶ್ ಎಂ.ವಿ. ನೇಮಕ
ಬೆಂಗಳೂರು, ಜೂನ್ 7: ಐಎಎಸ್ ಅಧಿಕಾರಿ ಡಾ. ವೆಂಕಟೇಶ್ ಎಂ.ವಿ. (2009 ಬ್ಯಾಚ್) ಅವರನ್ನು ಸಹಕಾರ ಸಂಘಗಳ ನಿಬಂಧಕರಾಗಿ ವರ್ಗಾವಣೆ ಮಾಡಿ ನೇಮಕ ಮಾಡಲಾಗಿದೆ.
ಈ ಮೊದಲು ಅವರು ಯೋಜನೆ, ಕಾರ್ಯಕ್ರಮ ಮೇಲ್ವಿಚಾರಣೆ ಮತ್ತು ಅಂಕಿಅಂಶ ಇಲಾಖೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ರಾಜ್ಯದ ಸಹಕಾರ ಕ್ಷೇತ್ರದ ಆಡಳಿತ ಮತ್ತು ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಅವರು ವಹಿಸಿಕೊಳ್ಳಲಿದ್ದಾರೆ.
