Home ಬೆಂಗಳೂರು ನಗರ Veteran actress Leelavati | ಕಾರಿನ ಬಳಿಯೇ ಬಂದು ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ...

Veteran actress Leelavati | ಕಾರಿನ ಬಳಿಯೇ ಬಂದು ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆ ಶಿವಕುಮಾರ್

13
0
Veteran actress Leelavati | DCM DK Shivakumar came near car, inquired about her health
Veteran actress Leelavati | DCM DK Shivakumar came near car, inquired about her health
Advertisement
bengaluru
  • ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್ ರಾಜ್ ಮನವಿಗೆ ಸ್ಪಂದಿಸಿದ ಡಿಸಿಎಂ

ಬೆಂಗಳೂರು:

“ಸೋಲದೇವನಹಳ್ಳಿಯಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಉದ್ಘಾಟನೆ ಹಾಗೂ ನಿವೇಶನ ನೋಂದಣಿ ವಿಚಾರವಾಗಿ ಹಿರಿಯ ನಟಿ ಲೀಲಾವತಿ ಹಾಗೂ ಅವರ ಮಗ ವಿನೋದ್ ರಾಜ್ ಅವರು ಮಾಡಿದ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಸದಾಶಿವನಗರದ ತಮ್ಮ ನಿವಾಸಕ್ಕೆ ಶನಿವಾರ ಆಗಮಿಸಿದ್ದ ಲೀಲಾವತಿ ಹಾಗೂ ವಿನೋದ್ ರಾಜ್ ಅವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು “ಪ್ರಾಣಿಗಳ ರಕ್ಷಣೆ ಈ ತಾಯಿ ಮಗನ ನೆಚ್ಚಿನ ಹವ್ಯಾಸ. ಪಶುವೈದ್ಯಕೀಯ ಕಾಲೇಜು ಉದ್ಘಾಟನೆಗೆ ದಿನಾಂಕ ನೀಡಿ ಎಂದು ಅವರು ನನಗೆ ಕೇಳಿದ್ದಾರೆ. ನಾನು ಸಮಯ ನೋಡಿ ದಿನಾಂಕ ನೀಡುತ್ತೇನೆ. ಇನ್ನು ಅವರಿಗೆ ನಿಗದಿಯಾಗಿರುವ ನಿವೇಶನ ನೋಂದಣಿ ವಿಚಾರವಾಗಿಯೂ ಅವರು ಮನವಿ ಸಲ್ಲಿಸಿದ್ದಾರೆ. ಈ ವಿಚಾರಗಳ ಬಗ್ಗೆ ಅವರಿಗೆ ಅಗತ್ಯ ಸಹಕಾರ ನೀಡುತ್ತೇವೆ” ಎಂದರು.

“ಹಿರಿಯರಾದ ಲೀಲಾವತಿ ಅವರನ್ನು ಕರೆದುಕೊಂಡು ಬರುವುದು ಬೇಡ, ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದೆ. ಆದರೂ ಅವರು ನನ್ನ ಮೇಲೆ ಅಭಿಮಾನವಿಟ್ಟು ಬಂದಿದ್ದಾರೆ. ಅವರಿಗೆ ಉತ್ತಮವಾದ ಆರೋಗ್ಯ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದರು.

bengaluru bengaluru

ನಿಮ್ಮ ಆರೋಗ್ಯ ಸರಿ ಇಲ್ಲದ ಕಾರಣ ಇಷ್ಟು ದೂರ ಬರುವುದು ಬೇಡ ಎಂದು ಹೇಳಿದ್ದೆ, ಆದರೂ ನೀವು ಬಂದಿದ್ದು ಸಂತಸವಾಯಿತು. ನೀವು ಹೇಳಿದ ದಿನಾಂಕದಂದು ಬಂದು ಪಶುವೈದ್ಯಕೀಯ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ ಶಿವಕುಮಾರ್ ಅವರು ಹಿರಿಯ ನಟಿ ಲೀಲಾವತಿ ಅವರ ಕ್ಷೇಮ ವಿಚಾರಿಸಿದರು.

ಡಿಸಿಎಂ ಭೇಟಿಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ನಟ ವಿನೋದ್ ರಾಜ್ ಅವರು “ನಾವು ಸುಸಜ್ಜಿತವಾದ ಪಶು ಚಿಕಿತ್ಸೆ ಆಸ್ಪತ್ರೆ ನಿರ್ಮಾಣ‌ ಮಾಡಿದ್ದು, ಸಿಬ್ಬಂದಿಗಳನ್ನು ಸರ್ಕಾರದ ಕಡೆಯಿಂದ ನಿಯೊಜಿಸಬೇಕಾಗಿ ಮನವಿ ಸಲ್ಲಿಸಿದ್ದೇವೆ. ಸೊಂಡೆಕೊಪ್ಪ ಬಳಿ ವಿದ್ಯುತ್ ಸಬ್‌ಸ್ಟೇಷನ್ ಕಾಮಗಾರಿ ಶೇ 99 ರಷ್ಟು ನಿರ್ಮಾಣವಾಗಿ ನಿಂತು ಹೋಗಿದ್ದು, ಅದನ್ನು ಕಾರ್ಯಗತಗೊಳಿಸಿದರೆ ಆ ಭಾಗದ ರೈತರಿಗೆ ಉಪಯೋಗವಾಗುತ್ತದೆ” ಎಂದು ಡಿಸಿಎಂ ಅವರ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.


bengaluru

LEAVE A REPLY

Please enter your comment!
Please enter your name here