Home ಬೆಂಗಳೂರು ನಗರ Veteran Kannada film actress Leelavati passed away | ಕನ್ನಡ ಚಿತ್ರರಂಗದ ಹಿರಿಯ ನಟಿ...

Veteran Kannada film actress Leelavati passed away | ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

109
0
Veteran Kannada film actress Leelavati passed away |

ಬೆಂಗಳೂರು:

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (actress Leelavati) ಇಂದು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ನಟರು ಇತ್ತೀಚೆಗೆ ಭೇಟಿ ನೀಡಿದ್ದರು.

ಹಿರಿಯ ನಟಿ ಲೀಲಾವತಿ ಅವರು ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದಾರೆ. ಲೀಲಾವತಿ ಅವರು ಕನ್ನಡ ಅಷ್ಟೇ ಅಲ್ಲದೆ ತಮಿಳು, ತೆಲಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

Also Read: 600 Movie Legend, Leelavati, Succumbs to Age-Related Illness

ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಾಂತಾ ತುಕಾರಾಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಹೆಸರುವಾಸಿಯಾಗಿದ್ದಾರೆ.

ಲೀಲಾವತಿ ಅವರು ಪುತ್ರ, ಕನ್ನಡ ಚಿತ್ರರಂಗದ ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here