ವಿಜಯಪುರ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ತಾಯಿ-ಮಗ (mother And Son) ಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಇಂದು(ನವೆಂಬರ್ 30) ವಿಜಯಪುರ (Vijayapura) ಜಿಲ್ಲೆ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದಿಂದ ಇಂದು(ಬುಧವಾರ) ಸಂಜೆ ಶರಣಪ್ಪ ಚನ್ನಮಲ್ಲಪ್ಪ ರೂಗಿ (48) ನಿಧನರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿದ ತಾಯಿ ಸುಗಲಾಬಾಯಿ ಚನ್ನಮಲ್ಲಪ್ಪ ರೂಗಿ (65) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸಾವಿನಲ್ಲೂ ತಾಯಿ ಮತ್ತು ಮಗ ಒಂದಾಗಿದ್ದಾರೆ. ಇದರಿಂದ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ