
Vijayapura: More than 30 female students are sick after eating food on which a lizard had fallen
ವಿಜಯಪುರ:
ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿರುವ ಕಸ್ತೂರ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಮಧ್ಯಾಹ್ನ ಶಾಲೆಯಿಂದ ಬಂದ ಮೇಲೆ ಊಟ ಮಾಡಿದ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾಸ್ಟೆಲ್ ಗೆ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ನೀಡಲಾಗಿದ್ದು ಸದ್ಯ ಎಲ್ಲರ ಆರೋಗ್ಯ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈದ್ಯರುತಿಳಿಸಿರುವುದಾಗಿ ವರದಿಯಾಗಿದೆ.
ಘಟನೆ ಬಗ್ಗೆ ಹಾಸ್ಟೆಲ್ ವಾರ್ಡನ್, ಅಡುಗೆ ಸಿಬ್ಬಂದಿ ಜೊತೆಗೆ ಗ್ರಾಮಸ್ಥರು ವಾಗ್ವಾದ ನಡೆಸಿದ್ದು, ತಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.