Home ಬೆಂಗಳೂರು ನಗರ ಬೆಂಗಳೂರಿನಲ್ಲಿ ಲಾರಿ‌ ಪಲ್ಟಿ; ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ಸಾವು

ಬೆಂಗಳೂರಿನಲ್ಲಿ ಲಾರಿ‌ ಪಲ್ಟಿ; ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ ಸಾವು

164
0
Karnataka CM Basavaraj Bommai condoles death of journalist Gangadhar Murthy
bengaluru

ಬೆಂಗಳೂರು:

ವಿಜಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಗಂಗಾಧರ ಮೂರ್ತಿ (48) ಸಾವು ಅವರು ಬೈಕ್​ನಲ್ಲಿ ಚಾಮರಾಜಪೇಟೆಯಲ್ಲಿರುವ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಡೆದಿದ ರಸ್ತೆ ಅಪಘಾತವೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ.

ಗಂಗಾಧರ ಮೂರ್ತಿ ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Karnataka CM Basavaraj Bommai condoles death of journalist Gangadhar Murthy1

ಇದನ್ನೂ ಓದಿ: ಪತ್ರಕರ್ತ ಗಂಗಾಧರ ಮೂರ್ತಿ ನಿಧನಕ್ಕೆ ಸಿಎಂ ಸವರಾಜ ಬೊಮ್ಮಾಯಿ ಸಂತಾಪ

bengaluru

ನಿಯಂತ್ರಣ ತಪ್ಪಿದ ಲಾರಿ (ಎಂಹೆಚ್‌ 04 ಹೆಚ್‌ಎಸ್‌ 2180) ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದಿದ್ದಾರೆ.

ವಿಜಯವಾಣಿ ಪತ್ರಿಕೆಯಲ್ಲಿ ಸಬ್ ಎಡಿಟರ್ ಆಗಿದ್ದ ಗಂಗಾಧರ ಮೂರ್ತಿ ನಿಧನಕ್ಕೆ ವಿಜಯವಾಣಿ ಬಳಗ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ನಗರದ ಟೌನ್ ಹಾಲ್ ಮುಂದೆ ಲಾರಿಯೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಿದ್ದ ಪರಿಣಾಮ ಲಾರಿ ಅಡಿಗೆ ಸಿಲುಕಿ ಬೈಕ್​ ಸವಾರ ಗಂಗಾಧರ ಮೂರ್ತಿ ಮೃತಪಟ್ಟಿದ್ದಾರೆ.

bengaluru

LEAVE A REPLY

Please enter your comment!
Please enter your name here