Home ಬೆಂಗಳೂರು ನಗರ ಮನಮೋಹನ್ ಸಿಂಗ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಮನಮೋಹನ್ ಸಿಂಗ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

11
0

ಬೆಂಗಳೂರು: ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ಹಿರಿಯ ರಾಜಕಾರಣಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಡಾ.ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 1970 ರ ದಶಕದಲ್ಲಿ ಅವರು ಭಾರತ ಸರ್ಕಾರದ ಆರ್ಥಿಕ ಸಲಹೆಗಾರರಾಗಿದ್ದರು. ಬಳಿಕ ಆಗಿನ ಪ್ರಧಾನಮಂತ್ರಿ ನರಸಿಂಹ ರಾವ್ ಅವರ ಆರ್ಥಿಕ ಸಲಹೆಗಾರರಾದರು.

ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕರಾಗಿ ಮತ್ತು ಗವರ್ನರ್ ಆಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

ಹಿರಿಯರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

LEAVE A REPLY

Please enter your comment!
Please enter your name here