
Vijayendra talks with Kumaraswamy with a view to winning all 28 Lok Sabha constituencies in Karnataka
ಬೆಂಗಳೂರು:
ಬಿವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆಯೇ ಇದೀಗ ಮೈತ್ರಿ ಪಕ್ಷದ ನಾಯಕ ಮಾಜಿ ಮಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು.
ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದೆ.
ಈ ಕುರಿತು Xನಲ್ಲಿ ಮಾಹಿತಿ ಹಂಚ್ಕೊಂಡಿರುವ ವಿಜಯೇಂದ್ರ ಅವರು: “ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಖ್ಯಮಂತ್ರಿಗಳಾದ ಮಾನ್ಯ ಶ್ರೀ @hd_kumaraswamy ಅವರನ್ನು ಇಂದು ಬಿಡದಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾನ್ಯ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್ ಜೊತೆಗೂಡಿ ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ದೃಷ್ಟಿಯಿಂದ ಮಾತುಕತೆ ನಡೆಸಲಾಯಿತು.”
ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಖ್ಯಮಂತ್ರಿಗಳಾದ ಮಾನ್ಯ ಶ್ರೀ @hd_kumaraswamy ಅವರನ್ನು ಇಂದು ಬಿಡದಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾನ್ಯ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್ ಜೊತೆಗೂಡಿ ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ದೃಷ್ಟಿಯಿಂದ… pic.twitter.com/Gf1StEa3QG
— Vijayendra Yediyurappa (@BYVijayendra) November 26, 2023