ಬೆಂಗಳೂರು/ಬೆಳಗಾವಿ:
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ಸಿನ ಹಿರಿಯ ಮುಖಂಡ ಸಿದ್ದರಾಮಯ್ಯ ಅವರು ಮತ್ತೊಂದು ವಿವಾದವೊಂದರಲ್ಲಿ ಸಿಲುಕಿದ್ದಾರೆ. ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದ ವಿಡಿಯೋ ಒಂದು ವೈರಲ್ ಆಗಿದ್ದು ಆ ವಿಡಿಯೋನಲ್ಲಿ ಅವರು ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆಯಲ್ಲಿ ಜನರನ್ನು 500 ರೂಪಾಯಿ ಕೊಟ್ಟು ಕರೆದುಕೊಂಡು ಬನ್ನಿ ಎನ್ನುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
Also Read: Viral Video: Siddu allegedly asking Cong leaders to pay Rs 500 for mobilising people
ಅಂದ್ಹಾಗೆ ಇದು ನಡೆದಿದ್ದೆಲ್ಲಿ ಗೊತ್ತಾ? ಬೆಳಗಾವಿ ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಜನಧ್ವನಿ ಯಾತ್ರೆಗೆ 500 ರೂಪಾಯಿ ಕೊಟ್ಟು ಕರೆದುಕೊಂಡು ಬಂದ ಮುಖಗಳೇ ಗೋಚರಿಸಿವೆ ಎನ್ನುವ ಸಿದ್ದರಾಮಯ್ಯ ಹೇಳಿಕೆಯ ವಿಡಿಯೋ ಬಗ್ಗೆ ಈಗ ಎಲ್ಲೆಡೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ನ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಹಾಗೂ ಲಕ್ಷ್ಮೀ ಸಹೋದರ ಚನ್ನರಾಜ ಹಟ್ಟಿಹೊಳಿ ಇವರ ಮಾತುಕತೆಯಲ್ಲಿ ಮುಂದಿನ ಪ್ರಜಾಧ್ವನಿಗೆ ಪ್ರತಿ ವ್ಯಕ್ತಿಗೆ ರೇಟ್ ಫಿಕ್ಸ್ ಮಾಡಿ ಕರೆತನ್ನಿ ಎನ್ನುತ್ತಿರುವ ಸಿದ್ದರಾಮಯ್ಯನವರ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮುಳುವಾದರೆ, ಕಮಲ ಪಾಳೇಯದ ಮುಖಂಡರಿಗೆ ಕಾಂಗ್ರೆಸ್ ಮೇಲೆ ಮುಗಿಬೀಳಲು ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.
ಇದನ್ನೂ ಓದಿ: Siddaramaiah Viral Video: ಕಾಂಗ್ರೆಸ್ ಕಥೆ ಈಗ ಮುಂಡಾಸು ಇಲ್ಲದಿರೋ ಮದುಮಗನ ಥರ ಆಗಿದೆ ಎಂದು ಬಿಜೆಪಿ ಟೀಕೆ