ಏಕದಿನ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಅವರು ವಿಶೇಷ ದಾಖಲೆ ಬರೆದಿದ್ದಾರೆ.
ಏಕದಿನ ವಿಶ್ವಕಪ್ನ ಐದನೇ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು. ಜಸ್ಪ್ರೀತ್ ಬುಮ್ರಾ ಎಸೆದ ಪಂದ್ಯದ ಮೂರನೇ ಓವರ್ನ 2ನೇ ಎಸೆತವು ಆಸೀಸ್ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಅವರ ಬ್ಯಾಟ್ ಅನ್ನು ಸವರಿ ಸ್ಲಿಪ್ನತ್ತ ಚಿಮ್ಮಿತ್ತು.
ಕ್ಷಣಾರ್ಧದಲ್ಲೇ ಅದ್ಭುತ ಡೈವಿಂಗ್ನೊಂದಿಗೆ ವಿರಾಟ್ ಕೊಹ್ಲಿ ಚೆಂಡನ್ನು ಹಿಡಿದರು. ಈ ಕ್ಯಾಚ್ನೊಂದಿಗೆ ಏಕದಿನ ವಿಶ್ವಕಪ್ನಲ್ಲಿ ಅತ್ಯಧಿಕ ಕ್ಯಾಚ್ ಹಿಡಿದ ಭಾರತೀಯ ಫೀಲ್ಡರ್ ಎಂಬ ದಾಖಲೆ ಕಿಂಗ್ ಕೊಹ್ಲಿ ಪಾಲಾಯಿತು.
ಇದಕ್ಕೂ ಮುನ್ನ ಈ ದಾಖಲೆ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿತ್ತು. ಕುಂಬ್ಳೆ ಏಕದಿನ ವಿಶ್ವಕಪ್ನಲ್ಲಿ ಒಟ್ಟು 14 ಕ್ಯಾಚ್ಗಳನ್ನು ಹಿಡಿದು ದಾಖಲೆ ನಿರ್ಮಿಸಿದ್ದರು.
The post Virat Kohli Records; ಏಕದಿನ ವಿಶ್ವಕಪ್ ನಲ್ಲಿ ವಿಶೇಷ ದಾಖಲೆ ಬರೆದ ವಿರಾಟ್ ಕೊಹ್ಲಿ appeared first on Ain Live News.