ಶನಿವಾರ ಮೈಸೂರು ನಗರದ ಪೊಲೀಸ್ ಆಯುಕ್ತರಾಗಿ ವಿಷ್ಣುವರ್ಧನ ಎನ್. ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಪುಷ್ಪಗುಚ್ಛ ನೀಡಿ ಶುಭ ಹಾರೈಸಲಾಯಿತು. ಫೋಟೊ: ಡಿಜಿಪಿ ಕರ್ನಾಟಕ / ಕರ್ನಾಟಕ ರಾಜ್ಯ ಪೊಲೀಸ್
ಮೈಸೂರು: ಮೈಸೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ವಿಷ್ಣುವರ್ಧನ ಎನ್. ಅವರು ಶನಿವಾರ ಅಧಿಕಾರ ವಹಿಸಿಕೊಂಡರು.
ಉಪ ಪೊಲೀಸ್ ಆಯುಕ್ತ ಕೆ.ಎಸ್. ಸುಂದರ್ ರಾಜ್ ಅವರು ನೂತನ ಆಯುಕ್ತರಿಗೆ ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು.
ಈ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
