Home ಬೆಂಗಳೂರು ನಗರ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಹನುಮಾನ್ ಚಾಲೀಸ ಪಠಿಸುವ ಮೂಲಕ ಕಾಂಗ್ರೆಸ್ ಪಕ್ಷದ...

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಹನುಮಾನ್ ಚಾಲೀಸ ಪಠಿಸುವ ಮೂಲಕ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ವಿರೋಧ

85
0
Vishva Hindu Parishad and Bajrang Dal activists chanting Hanuman Chalisa against Congress party manifesto in Bengaluru
Vishva Hindu Parishad and Bajrang Dal activists chanting Hanuman Chalisa against Congress party manifesto in Bengaluru

ಬೆಂಗಳೂರು:

ಮೊನ್ನೆ ಬಿಡುಗಡೆಯಾದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದಾಗಿ ಕೈ ಪಕ್ಷ ಘೋಷಿಸಿಕೊಂಡಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಇಂದು ಬೆಂಗಳೂರಿನ ವಿಜಯನಗರದಲ್ಲಿ ಹನುಮಾನ್ ಚಾಲೀಸ ಪಠಿಸುವ ಮೂಲಕ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ವಿರೋಧಿಸಿದರು.

ಭಜರಂಗದಳ ನಿಷೇಧದ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ಹಿಂದೂ ಮುಖಂಡರು ಕೆಂಡ ಕಾರಿದ್ದು, ರಾಜ್ಯಾದ್ಯಂತ ಕಾಂಗ್ರೆಸ್ ಸೋಲಿಸಲು ಬೀದಿಗಿಳಿದು ಹೋರಾಟ ಮಾಡಲು ಭಜರಂಗದಳ ಕರೆ ನೀಡಿದೆ. ನಿನ್ನೆ ಮಂಗಳೂರು ನಗರದಲ್ಲಿ ಕಾಂಗ್ರೆಸ್‌ ಪ್ರಣಾಳಿಕೆ ಪ್ರತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ.

ಚುನಾವಣೆಯಲ್ಲಿ ಸೋಲುವ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನಕ್ಕೆ ಮುಂದಾಗಿರುವ ಜನವಿರೋಧಿ ಕಾಂಗ್ರೆಸ್ ಪಕ್ಷವು ಭಜರಂಗದಳ ಸಂಘಟನೆಯನ್ನು ನಿಷೇಧ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ಸಚಿವ ಡಾ ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚುನಾವಣೆಯಲ್ಲಿ ಸೋಲುವ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಸಮಾಜದಲ್ಲಿ ಒಡಕು ಮೂಡಿಸುವ ಪ್ರಯತ್ನಕ್ಕೆ ಮುಂದಾಗಿರುವ ಜನವಿರೋಧಿ ಕಾಂಗ್ರೆಸ್ ಪಕ್ಷವು ಭಜರಂಗದಳ ಸಂಘಟನೆಯನ್ನು ನಿಷೇಧ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಭಾರೀ ಅಭಿಯಾನ: ಮಾಧ್ಯಮಗಳಲ್ಲಿ, ರಸ್ತೆಗಿಳಿದು ಪ್ರತಿಭಟನೆ ನಡೆಸಿ ಹಲವು ಸಂಘಟನೆಗಳು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಸೋಷಿಯಲ್ ಮೀಡಿಯಾಗಳಲ್ಲಿ ಸಹ ಬಿಜೆಪಿ ನಾಯಕರು, ಕಾರ್ಯಕರ್ತರು, ಹಿಂದೂಪರ ಸಂಘಟನೆಯವರು ಹಿಂದೆ ಬಿದ್ದಿಲ್ಲ, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹನುಮಂತನ ಫೋಟೋ ಹಾಕಿ ನಾನೊಬ್ಬ ಕನ್ನಡಿಗ, ನನ್ನ ನಾಡು ಹನುಮ ಜನಿಸಿದ ನಾಡು ನಾನೊಬ್ಬ ಭಜರಂಗಿ ಎಂದು ಹಾಕಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here