Home ರಾಜಕೀಯ ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣದ ವಿಧಾನಸಭೆಗೆ ಏಪ್ರಿಲ್ 17ರಂದು ಮತದಾನ

ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣದ ವಿಧಾನಸಭೆಗೆ ಏಪ್ರಿಲ್ 17ರಂದು ಮತದಾನ

60
0

ಬೆಂಗಳೂರು:

ರಾಜ್ಯದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಬೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಪ್ರಕಟವಾಗಿದೆ.

ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಿಗೂ ಏಪ್ರಿಲ್ 17ರಂದೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಕ್ಷೇತ್ರದ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜಿನಾಮೆಯಿಂದ ತೆರವಾಗಿದ್ದ ಕ್ಷೇತ್ರ. ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಬೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದೆ.

ಜೆಡಿಎಸ್ ಶಾಸಕ ಎಂಸಿ ಮನಗೂಳಿ ನಿಧನದಿಂದ ತೆರವಾಗಿದ್ದ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗಿಲ್ಲ.

Screenshot 11
Screenshot 12
Screenshot 13
Screenshot 14

LEAVE A REPLY

Please enter your comment!
Please enter your name here