ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯು ವಾರ್ಡ್ ಒನ್ ಅಭಿಯಾನದಡಿ 9.2 ಕಿ.ಮೀ ರಸ್ತೆಗಳಲ್ಲಿ ನಾಗರಿಕ ಸುಧಾರಣಾ ಕಾಮಗಾರಿಗಳನ್ನು ಕೈಗೊಂಡಿದ್ದು, 13 ಗುಂಡಿಗಳನ್ನು ದುರಸ್ತಿ ಮಾಡಿ, 14 ಕಸದ ಬ್ಲ್ಯಾಕ್ ಸ್ಪಾಟ್ಗಳನ್ನು ತೆರವುಗೊಳಿಸಿ, 171 ಟನ್ ಕಟ್ಟಡ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ ಎಂದು ನವೆಂಬರ್ 5ರ ಪಾಲಿಕೆಯ ಮಾಧ್ಯಮ ಪ್ರಕಟಣೆ ತಿಳಿಸಿದೆ.
ರಾಜೀವ್ ಗಾಂಧಿ ನಗರ, ಜಕ್ಕೂರು, ಹೆಣ್ಣೂರು ಸೇರಿದಂತೆ ಪ್ರದೇಶಗಳಲ್ಲಿ ಸ್ವಚ್ಛತೆ, ಪಾದಚಾರಿ ಮಾರ್ಗ ಉನ್ನತೀಕರಣ, ಗುಂಡಿ ದುರಸ್ತಿ ಮತ್ತು ಸಾರ್ವಜನಿಕ ಸೌಲಭ್ಯಗಳ ನಿರ್ವಹಣೆಗೆ ಒತ್ತು ನೀಡಿ ಕಾಮಗಾರಿ ಕೈಗೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ ಹಾಗೂ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾರ್ಯ ನಡೆಯುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
