ಪಶ್ಚಿಮ ಏಷ್ಯಾ ನಡುವಿನ ಯುದ್ಧದಿಂದಾಗಿ ರಾಜ್ಯಕ್ಕೆ ಇಂಧನ ಕೊರತೆ ಎದುರಾಗಿದೆ. ಅಡುಗೆ ಅನಿಲ ಪೂರೈಕೆಯಲ್ಲೂ ಭಾರಿ ವ್ಯತ್ಯಯ ಉಂಟಾಗಿದ್ದು ಇದು ಸಾರ್ವಜನಿಕರು ಹಾಗೂ ಹೋಟೆಲ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದೆ. ಈ ಬಗ್ಗೆ ವಿಧಾನಸಭೆಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಶುಕ್ರವಾರ ಮಾಹಿತಿ ನೀಡಿದರು.
