Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • We must be united to protect our constitution and democracy: AICC President Mallikarjun Kharge| ನಮ್ಮ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವುದಕ್ಕಾಗಿ ನಾವು ಒಗ್ಗಟ್ಟಾಗಿರಬೇಕು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ
  • ರಾಜಕೀಯ
  • ಬೆಂಗಳೂರು ನಗರ

We must be united to protect our constitution and democracy: AICC President Mallikarjun Kharge| ನಮ್ಮ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವುದಕ್ಕಾಗಿ ನಾವು ಒಗ್ಗಟ್ಟಾಗಿರಬೇಕು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ

The Bengaluru Live January 26, 2024 12:45 PM 1 minute read
We must be united to protect our constitution and democracy: AICC President Mallikarjun Kharge

We must be united to protect our constitution and democracy: AICC President Mallikarjun Kharge| ನಮ್ಮ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವುದಕ್ಕಾಗಿ ನಾವು ಒಗ್ಗಟ್ಟಾಗಿರಬೇಕು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

“ನಮ್ಮ ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವುದಕ್ಕಾಗಿ ನಾವು ಒಗ್ಗಟ್ಟಾಗಿರಬೇಕು” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರಜುನ ಖರ್ಗೆಯವರು ತಿಳಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ವೇಳೆ ಅವರು: “ಭಾರತದ ಇತಿಹಾಸದಲ್ಲಿ ಜನವರಿ 26 ವಿಶೇಷವಾದ ದಿನ. ಈ ದೇಶದಲ್ಲಿ ಸಂವಿಧಾನ ಅಸ್ತಿತ್ವದಲ್ಲಿ ಇರದಿದ್ದರೆ ನಾವು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಗುತ್ತಿರಲಿಲ್ಲ. ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದ ಮತ್ತು ಸಂವಿಧಾನ ಸಭೆಯ ನಾಯಕರು ಸೇರಿ ನಮ್ಮ ಸಂವಿಧಾನ ರಚಿಸಿದರು. ನಮ್ಮ ಸಂವಿಧಾನವು ಪ್ರಮುಖವಾಗಿ ಸಮಾನತೆ, ಭಾತೃತ್ವ, ಜಾತ್ಯಾತೀತತೆ, ನ್ಯಾಯ ತತ್ವಗಳಿಂದ ಕೂಡಿದೆ.”

ಈ ಸಂವಿಧಾನ ತಿರುಚಬೇಕೆಂದು, ಸಂವಿಧಾನ ಬದಲಿಸಬೇಕೆಂದು ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಪ್ರಯತ್ನ ಮಾಡುತ್ತಿವೆ. ನಮ್ಮ ಸ್ವಾಯತ್ತ ಸಂಸ್ಥೆಗಳನ್ನು ಒಂದೊಂದಾಗಿ ನಾಶಮಾಡುತ್ತಾ ಅದರ ಶಕ್ತಿಯನ್ನು ಕಡಿಮೆ ಮಾಡಲು ಬಿಜೆಪಿಯವರು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಆರ್‌ಎಸ್‌ಎಸ್‌ನ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದು, ಅದರಿಂದ ನಮ್ಮ ದೇಶದ ನ್ಯಾಯಾಂಗಕ್ಕೆ, ಜಾತ್ಯಾತೀತತೆಗೆ ಪೆಟ್ಟು ಬೀಳುತ್ತಿದೆ.

On the occasion of 75th Republic Day, Congress President Shri @kharge hoists the National flag in the presence of CM Shri @siddaramaiah and Deputy CM Shri @DKShivakumar at the Karnataka PCC office in Bengaluru.

It is our lifelong commitment to defend the fundamental and basic… pic.twitter.com/IhG3gDUyNl

— Congress (@INCIndia) January 26, 2024

ನಮ್ಮ ಪಕ್ಷ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದೆ. ಆದರೆ ಬಿಜೆಪಿಯವರು ಈಗ ಬಂದು ನಾವೇ ಈ ದೇಶವನ್ನು ಕಾಪಾಡುತ್ತಿರುವವರು, ನಾವೇ ನಿಜವಾದ ದೇಶ ಭಕ್ತರು ಉಳಿದವರೆಲ್ಲರು ದೇಶದ್ರೋಹಿಗಳು ಎನ್ನುವ ಭಾವನೆಯನ್ನು ನಮ್ಮ ದೇಶದ ಯುವಕರಲ್ಲಿ ಮೂಡಿಸುತ್ತಿದ್ದಾರೆ.

ಸ್ವಾತಂತ್ರ್ಯ ತಂದಿದ್ದೆ ಕಾಂಗ್ರೆಸ್‌ ಪಕ್ಷ. ಮಹಾತ್ಮ ಗಾಂಧಿಯವರು, ಪಂಡಿತ್‌ ಜವಾಹರ್‌ಲಾಲ್‌ ನೆಹರುರವರು, ವಲ್ಲಭಬಾಯಿ ಪಟೇಲ್‌ ರವರು, ಮೌಲಾನ ಅಬ್ದುಲ್‌ ಕಲಾಂ ಆಜಾದ್‌ ರವರು ಇವರಲ್ಲದೇ ಅನೇಕ ಹೋರಾಟಗಾರರು ಸೇರಿ ಹೋರಾಟದಿಂದ ನಮಗೆ ಸ್ವಾತಂತ್ರ್ಯವನ್ನು ತಂದಿದ್ದಾರೆ.

ನಮ್ಮ ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಮಂತ್ರಿಯವರು ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಮತ್ತು ಸಂವಿಧಾನ ಉಳಿದರೆ ಮಾತ್ರ ನಮ್ಮ ಮುಂದಿನ ಪೀಳಿಗೆ ಉಳಿಯುತ್ತದೆ. ಇಲ್ಲವಾದರೆ ಮುಂದಿನ ಪೀಳಿಗೆ ಎಲ್ಲದರಲ್ಲೂ ಅವಕಾಶ ವಂಚಿತರಾಗುತ್ತಾರೆ.

ಬಾಬಾ ಸಾಹೇಬರು ಸಂವಿಧಾನವನ್ನು ದೇಶಕ್ಕೆ ಒಪ್ಪಿಸುವಾಗ ಹೀಗೆ ಹೇಳಿದ್ದರು “ನಾವೆಲ್ಲರು ಸೇರಿ ಈ ಸಂವಿಧಾನವನ್ನು ಬರೆದು ನಿಮಗೆ ಕೊಡುತ್ತಿದ್ದೇವೆ, ಈ ಸಂವಿಧಾನವನ್ನು ಸರಿಯಾಗಿ ನಡೆಸಬೇಕು. ಸರ್ವರಿಗೂ ಅನುಕೂಲವಾಗಬೇಕು ಅಂದರೆ ಸಂವಿಧಾನವನ್ನು ನಡೆಸುವವರು ಒಳ್ಳೆಯವರಾಗಿರಬೇಕು ಇಲ್ಲದಿದ್ದರೆ ಆ ಸಂವಿಧಾನವೇ ಕೆಟ್ಟದಾಗುತ್ತದೆ”. 1949 ರಲ್ಲಿ ಬಾಬಾ ಸಾಹೇಬರು ಹೇಳಿದ ಮಾತು ಈ ದಿನ ಸತ್ಯವಾಗುತ್ತಿದೆ. ಈ ಸಂವಿಧಾನವನ್ನು ನಡೆಸಿಕೊಂಡು ಹೋಗುವಂತಹ ಜನ ಸರಿ ಇಲ್ಲದೆ ಇರುವುದಕ್ಕೆ ದೇಶದಲ್ಲಿ ಅಸಮಾನತೆ ಅಸಮತೋಲನೆ ಎದ್ದು ಕಾಣುತ್ತಿದೆ.

ಸ್ವಾತಂತ್ರ್ಯ ಬಂದಾಗಿನಿಂದ 2014ರ ವರೆಗೆ ಈ ದೇಶದ ಸಾಲ 55 ಲಕ್ಷ ಕೋಟಿ ಇತ್ತು, ಆದರೆ ಈಗ ಬಿಜೆಪಿ ಸರ್ಕಾರ 10 ವರ್ಷಗಳಲ್ಲಿ 150 ಲಕ್ಷ ಕೋಟಿ ಸಾಲ ಮಾಡಿದೆ.

ಇಂದಿನ ಪರಿಸ್ಥಿತಿಯಲ್ಲಿ ನಮ್ಮ ಸಂವಿಧಾನಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಎರಡಕ್ಕೂ ಧಕ್ಕೆ ಇದೆ. ಇದರಿಂದ ನಮ್ಮ ಯುವಪೀಳಿಗೆಗೆ ಇನ್ನೂ ಹೆಚ್ಚಿನ ಅಪಾಯ ಇದೆ. ದಿನೇ ದಿನೇ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಏರುತ್ತಿದೆ. ಈ ಅನಾಹುತವನ್ನು ತಡೆಯಬೇಕು ಎಂದರೆ ಬರುವ ಲೋಕಸಭಾ ಚುನಾವಣೆಯಲ್ಲಿ ನೀವೆಲ್ಲರು ಕಾಂಗ್ರೆಸ್‌ಗೆ ಶಕ್ತಿ ತುಂಬಬೇಕು.

ಕಾಂಗ್ರಸಿನೊಳಗೆ ಯಾರೇ ಬಂದರೂ ಸೇರಿಸಿಕೊಂಡು ಶಕ್ತಿಯನ್ನು ತುಂಬುವಂತಹ ಕೆಲಸ ಮಾಡಬೇಕು. ಹಾಗೆ ಪಕ್ಷಕ್ಕೆ ಬರುವವರು ನಿಷ್ಠಾವಂತರಾಗಿರಬೇಕು. ಇವತ್ತು ಬಂದು ನಾಳೆ ಹೋಗುವಂತೆ ಇರಬಾರದು. ನಾವು ಒಂದು ವಸ್ತುವನ್ನು ಕೊಳ್ಳಬೇಕಾದರೆ ಅನೇಕ ಪರೀಕ್ಷೆಗಳನ್ನು ಮಾಡಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ ಏನು? ಅವರ ಹಿನ್ನೆಲೆ ಏನು? ಅವರು ಯಾವ ತತ್ವವನ್ನು ಪಾಲಿಸುತ್ತಿದ್ದವರು ಇಂದು ಯಾವ ತತ್ವ ಒಪ್ಪಿಕೊಳ್ಳುತ್ತಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡುವುದು ಬಹಳ ಮುಖ್ಯ.

ನಮ್ಮ ಕಾಂಗ್ರೆಸ್‌ ಪಕ್ಷವು ತತ್ವ ಸಿದ್ಧಾಂತದ ಆಧಾರದ ಮೇಲೆ ನಿಂತಿದೆ. ತತ್ವಕ್ಕಾಗಿಯೇ ನಮ್ಮ ಪಕ್ಷದಲ್ಲಿ ಇಂದಿರಾಗಾಂಧಿಯವರು, ರಾಜೀವ್‌ ಗಾಂಧಿಯವರು ತಮ್ಮ ಜೀವವನ್ನೆ ತ್ಯಾಗ ಮಾಡಿದ್ದಾರೆ. ನಮ್ಮ ಪಕ್ಷ ತತ್ವಕ್ಕೆ ಬದ್ಧವಾಗಿದೆ, ನಮಗೆ ಬಡವರ ಬಗ್ಗೆ, ರೈತರ ಬಗ್ಗೆ, ವಿಧ್ಯಾರ್ಥಿಗಳ ಬಗ್ಗೆ ಮತ್ತು ಮಹಿಳೆಯರ ಬಗ್ಗೆ ಅಪಾರ ಕಾಳಜಿ ಇರುವ ಪಕ್ಷ.

ಹೆಣ್ಣಿಗೆ ಮತದಾನದ ಹಕ್ಕನ್ನು ತಂದಿದ್ದೆ ನಮ್ಮ ಪಕ್ಷ. ಆ ಕಾಲದಲ್ಲಿ ಮುಂದುವರೆದ ದೇಶಗಳಲ್ಲೆ ಮಹಿಳೆಗೆ ಮತದಾನದ ಹಕ್ಕಿರಲಿಲ್ಲ. ಅಂತಹ ಸಮಯದಲ್ಲಿ ಕಾಂಗ್ರೆಸ್‌ ಪಕ್ಷ ಸಂವಿಧಾನದ ಜೊತೆ ಜೊತೆಗೆ ಮಹಿಳೆಗೆ ಮತದಾನದ ಹಕ್ಕನ್ನು ನೀಡಿತು. ಇದರ ಶ್ರೇಯ ಬಾಬಾ ಸಾಹೇಬರು ಮತ್ತು ಪಂಡಿತ್‌ ಜವಾಹರ್‌ಲಾಲ್‌ ನೆಹರುರವರಿಗೆ ಸಲ್ಲುತ್ತದೆ.”

About the Author

The Bengaluru Live

Administrator

Visit Website View All Posts

Post navigation

Previous: Yathindra will not contest Lok Sabha elections from Kodagu: Chief Minister Siddaramaiah| ಲೋಕಸಭಾ ಚುನಾವಣೆಯಲ್ಲಿ ಕೊಡಗಿನಿಂದ ಯತೀಂದ್ರ ಸ್ಪರ್ಧಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Next: Sangolli Rayanna was caught and handed over to the British by our cunning| ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು

Related Stories

ಸಂವಿಧಾನ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿ ನೆರೆದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

The Bengaluru Live November 26, 2026 11:33 AM
ವಿಧಾನಸೌಧದ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ

The Bengaluru Live November 26, 2026 10:43 AM
ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

The Bengaluru Live November 25, 2026 10:03 PM

Latest Post

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ ನವೆಂಬರ್ ಪಡಿತರ ವಿತರಣೆಯ ತೊಂದರೆಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ನವೆಂಬರ್ 26ರ ಟಿಪ್ಪಣಿಯ ಮೊದಲ ಪುಟ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

November 26, 2026 1:05 PM
ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ ಸಂವಿಧಾನ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿ ನೆರೆದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

November 26, 2026 11:33 AM
ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ ವಿಧಾನಸೌಧದ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ

November 26, 2026 10:43 AM
ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

November 25, 2026 10:03 PM
ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ ಮಂಗಳೂರಿನಲ್ಲಿ ಡೆಲಾಯ್ಟ್ ಕಚೇರಿ ಉದ್ಘಾಟನೆಯಲ್ಲಿ ಮಾತನಾಡುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ

ರಾಜ್ಯ ಜಿಡಿಪಿಗೆ ಎರಡನೇ ಅತಿ ದೊಡ್ಡ ಕೊಡುಗೆ ನೀಡುವ ಜಿಲ್ಲೆ ದಕ್ಷಿಣ ಕನ್ನಡ: ಪ್ರಿಯಾಂಕ್ ಖರ್ಗೆ

November 25, 2026 9:46 PM
ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪವಾಗಿಲ್ಲ: ಕೆಇಎ

November 25, 2026 9:44 PM

ನೀವು ತಪ್ಪಿಸಿಕೊಂಡಿರಬಹುದು

ನವೆಂಬರ್ ಪಡಿತರ ವಿತರಣೆಯ ತೊಂದರೆಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ನವೆಂಬರ್ 26ರ ಟಿಪ್ಪಣಿಯ ಮೊದಲ ಪುಟ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

The Bengaluru Live November 26, 2026 1:05 PM
ಸಂವಿಧಾನ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿ ನೆರೆದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

The Bengaluru Live November 26, 2026 11:33 AM
ವಿಧಾನಸೌಧದ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ

The Bengaluru Live November 26, 2026 10:43 AM
ಏರೋ ಇಂಡಿಯಾ ಪ್ರದರ್ಶನ ಸ್ಥಳದಲ್ಲಿ ಏರೋ ಇಂಡಿಯಾ ಲಾಂಛನದ ಚೀಲಗಳು ಮತ್ತು ರಾಷ್ಟ್ರಧ್ವಜಗಳು
  • ಬೆಂಗಳೂರು ನಗರ

ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ

The Bengaluru Live November 25, 2026 10:03 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ
  • ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ
  • ಸಂವಿಧಾನ ದಿನ: ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಡಿಸಿಎಂ ಪರಮೇಶ್ವರ ಪುಷ್ಪನಮನ
  • ಏರೋ ಇಂಡಿಯಾ 2027: ಪ್ರದರ್ಶಕರ ದಾಖಲೆಯ ಬೇಡಿಕೆ; ಎರಡು ಹೊಸ ಹ್ಯಾಂಗರ್, ಮೊದಲ ಬಾರಿಗೆ ಮೆಜ್ಜನೈನ್ ಮಹಡಿಗೆ ಅನುಮತಿ
©Copyright 2025 The Bengaluru Live All rights reserved. | MoreNews by AF themes.