Home ಕರ್ನಾಟಕ Almatti Dam: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಭೇಟಿಗೆ ಸಮಯ ಕೇಳುತ್ತೇವೆ:...

Almatti Dam: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಭೇಟಿಗೆ ಸಮಯ ಕೇಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

34
0
DCM DK Shivakumar inspected the site in Kommagatta, Bengaluru regarding the construction of the Skydeck. MLA ST Somashekar, BDA In-charge Commissioner Manivannan, BBMP Chief Commissioner Maheshwar Rao and others were present.

ಬೆಂಗಳೂರು, ಜೂ.03: “ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮಹಾರಾಷ್ಟ್ರ ಸಿಎಂ ಪತ್ರಕ್ಕೆ, ನಮ್ಮ ಮುಖ್ಯಮಂತ್ರಿಗಳು ಪತ್ರ ಬರೆದ ನಂತರ, ಈ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುಮ್ಮನಹಳ್ಳಿ ಮಾಗಡಿ ರಸ್ತೆಯಲ್ಲಿರುವ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಜಮೀನು ಹಾಗೂ ಇದೇ 27 ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿರುವ ಡಾ. ಬಾಬು ಜಗಜೀವನ್ ರಾಮ್ ಸಂಶೋಧನಾ ಸಂಸ್ಥೆಯ ಸಭಾಂಗಣವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ವೀಕ್ಷಿಸಿದರು. ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಆಲಮಟ್ಟಿ ಅಣೆಕಟ್ಟು ಸಂಬಂಧ ಮುಖ್ಯಮಂತ್ರಿಗಳು ಮಹಾರಾಷ್ಟ್ರ ಸಿಎಂಗೆ ಪತ್ರ ಬರೆಯುವುದರ ಬಗ್ಗೆ ಕೇಳಿದಾಗ, “ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಪತ್ರಕ್ಕೆ ನಮ್ಮ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಪತ್ರ ಬರೆಯಲಿದ್ದಾರೆ. ನಾನು ನನ್ನ ಅಭಿಪ್ರಾಯವನ್ನು ಈಗಾಗಲೇ ಕಳುಹಿಸಿಕೊಟ್ಟಿದ್ದೇನೆ. ಸಿಎಂ ಬರೆಯುವ ಪತ್ರವನ್ನು ಎಲ್ಲಾ ಸಂಸದರಿಗೆ ಕಳುಹಿಸಿಕೊಡುತ್ತೇನೆ. ನಂತರ ಈ ವಿಚಾರವಾಗಿ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ದಿನಾಂಕ ಕೇಳುತ್ತೇವೆ. ಈ ವಿಚಾರವಾಗಿ ನಾವೆಲ್ಲಾ ಸೇರಿ ಒತ್ತಾಯ ಮಾಡಲೇಬೇಕು” ಎಂದು ಅಭಿಪ್ರಾಯ ಪಟ್ಟರು.

“ಮಹಾರಾಷ್ಟ್ರ ಸಿಎಂ ಫಡ್ನವೀಸ್ ಅವರು ಬುದ್ಧಿವಂತರಿದ್ದಾರೆ. ಈ ಹಿಂದೆ ಅವರೇ ಈ ಯೋಜನೆಗೆ ಬೆಂಬಲ ನೀಡಿದ್ದರು. ಈಗ ಅವರು ಯಾಕೆ ಈ ಪತ್ರ ಬರೆದರು ಎಂದು ಅಚ್ಚರಿಯಾಗಿದೆ. ಮಳೆ ಹೆಚ್ಚಾದಾಗ ಪ್ರವಾಹ ಬರುತ್ತದೆ. ಇದನ್ನು ನಿಭಾಯಿಸುವುದು ಅವರ ಕರ್ತವ್ಯ” ಎಂದು ಹೇಳಿದರು.

LEAVE A REPLY

Please enter your comment!
Please enter your name here