Home ಬೆಂಗಳೂರು ನಗರ ಕೇವಲ ಮೌಡ್ಯ ತುಂಬಿಕೊಂಡವರು ವಿವಿಗಳಿಂದ ಹೊರಗೆ ಬಂದರೆ ಏನು ಪ್ರಯೋಜನ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಕೇವಲ ಮೌಡ್ಯ ತುಂಬಿಕೊಂಡವರು ವಿವಿಗಳಿಂದ ಹೊರಗೆ ಬಂದರೆ ಏನು ಪ್ರಯೋಜನ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

30
0
What is use if only those who are full of money come out of universities: Chief Minister Siddaramaiah questions
What is use if only those who are full of money come out of universities: Chief Minister Siddaramaiah questions

ದೇಶವನ್ನು, ನಾಡನ್ನು ಮುನ್ನಡೆಸಲು ವೈಜ್ಞಾನಿಕ ಮನೋಭಾವದ, ವೈಚಾರಿಕ ತಿಳಿವಳಿಕೆಯ ಪದವೀಧರರ ಅಗತ್ಯವಿದೆ

ಬೆಂಗಳೂರು:

ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಡ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವ ವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ? ಆದ್ದರಿಂದ ವೈಜ್ಞಾನಿಕ ಮನೋಭಾವದ ಪದವೀಧರರನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಲಪತಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ 21-8-2023 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ಕಾರದ ವ್ಯಾಪ್ತಿಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ರೀತಿ ಪ್ರಶ್ನಿಸಿದರು.

ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ, ಆರ್ಥಿಕವಾಗಿ ಮತ್ತು ನಾಗರಿಕವಾಗಿ ಮುನ್ನಡೆಸುವ ಪದವೀಧರರನ್ನು ವಿಶ್ವ ವಿದ್ಯಾಲಯಗಳು ಸಜ್ಜುಗೊಳಿಸಬೇಕು. ಅದನ್ನು ಬಿಟ್ಟು ಕೇವಲ ಮೌಡ್ಯಗಳನ್ನು ತುಂಬಿಕೊಂಡು ಹೊರಗೆ ಬಂದರೆ ಅದರಿಂದ ದೇಶಕ್ಕೂ ಉಪಯೋಗವಿಲ್ಲ. ನಾಡಿಗೂ ಪ್ರಯೋಜನವಿಲ್ಲ. ಪದವೀಧರರ ಭವಿಷ್ಯಕ್ಕೂ ಉಪಯೋಗವಿಲ್ಲ ಎಂದರು.

ಸಭೆಯ ಇತರೆ ಮುಖ್ಯಾಂಶಗಳು:

1.ರಾಜ್ಯದ 32 ಸಾರ್ವಜನಿಕ ವಿವಿಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

2.ಕರ್ನಾಟಕ ರಾಜ್ಯದ ನಿವ್ವಳ ನೋಂದಣಿ ಅನುಪಾತ (GER) 36%

3.ರಾಷ್ಟ್ರೀಯ GER 27.4%

4.2030ರ ವೇಳೆಗೆ GER ಶೇ. 50ಕ್ಕೆ ಹೆಚ್ಚಿಸುವ ಗುರಿ ಇದೆ.

5.ಪುರುಷರ GER- 34.8%

6.ಮಹಿಳೆಯರು- 37.2%

7.ಪರಿಶಿಷ್ಟ ಜಾತಿ- 25.6%

8.ಪರಿಶಿಷ್ಟ ಪಂಗಡ- 23.4%

9.ರಾಜ್ಯದ 32 ಸಾರ್ವಜನಿಕ ವಿವಿಗಳಲ್ಲಿ 1.31 ಲಕ್ಷ ವಿದ್ಯಾರ್ಥಿಗಳು
GER ಪ್ರಮಾಣ ಸರ್ಕಾರಿ ಕಾಲೇಜುಗಳಲ್ಲಿ ಎಷ್ಟು, ಖಾಸಗಿ ಕಾಲೇಜುಗಳಲ್ಲಿ ಎಷ್ಟು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರದ್ದು ಎಷ್ಟು ಎಂದು ಮಾಹಿತಿ ಇಟ್ಟುಕೊಂಡಿರಬೇಕು.

ಯುಯುಸಿಎಂಎಸ್‌ ನಲ್ಲಿ ಮಾಹಿತಿ ದಾಖಲಿಸಲಾಗುತ್ತಿದೆ.

GER ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಾದ ಚಾಮರಾಜನಗರ, ಯಾದಗಿರಿ, ಹಾಸನ, ಕೊಪ್ಪಳ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಿಸಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಮತ್ತು ಸಂಶೋಧನೆಗಳನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ರಾಜ್ಯದ ಅತ್ಯಂತ ಹಳೆಯ ಮತ್ತು ಮೊದಲ ವಿವಿ ಆಗಿರುವ ಮೈಸೂರು ವಿವಿಯ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

(ಸಭೆಯ ಆರಂಭಿಕ ಸುದ್ದಿ. ಸಭೆ ಮುಂದುವರೆದಿದೆ)

LEAVE A REPLY

Please enter your comment!
Please enter your name here