ಬೆಂಗಳೂರು:
ಸ್ಮಾರ್ಟ್ ಸಿಟಿ ಯೋಜನೆಯ ಅಂಗವಾಗಿ ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣದಿಂದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದವರೆಗೆ ಬುಧವಾರದಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭಗೊಳ್ಳಲಿದೆ.
ಈ ಕುರಿತು ಬಿಬಿಎಂಪಿ ಪ್ರಕಟಣೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದ ಪ್ರಮುಖ ರಸ್ತೆಗಳಿಗೆ ವೈಟ್ ಟಾಪಿಂಗ್ ಅಳವಡಿಸಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆಯಡಿ ತುಮಕೂರು ರಸ್ತೆ ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣ ದಿಂದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದವರೆಗೆ ವೈಟ್‌ಟಾಪಿಂಗ್ ಅಳವಡಿಸಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಸರ್ಕಾರದಿಂದ ಅಧಿಕೃತ ಅನುಮತಿ ದೊರೆಯತಿದೆ ಎಂದಿದೆ.
ಅದರಂತೆ ತುಮಕೂರು ರಸ್ತೆ-ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣ ದಿಂದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದವರೆಗೆ 1.9 ಕಿ.ಮೀ ಉದ್ದ ವೈಟ್ ಟಾಪಿಂಗ್ ಕಾಮಗಾರಿಯನ್ನು ದಿನಾಂಕ: 15.09.2021 ರಿಂದ ಪ್ರಾರಂಭಿಸಲಾಗುತ್ತದೆ. ಮೇಲ್ಕಂಡ ರಸ್ತೆಯು 15 ಮೀಟರ್ ಅಗಲವಿದ್ದು, ಅರ್ಧ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭಿಸಿ ಇನ್ನುಳಿದರ್ಧ ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.
Read Here: White-topping to begin on Goraguntepalya-Sandal Soap Factory stretch