Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಈ ಸಾವುಗಳಿಗೆ ಯಾರು ಹೊಣೆ? ಈ ಸರ್ಕಾರ ನಂಬಿಕೆ ಕಳೆದುಕೊಂಡಿದೆ: ಡಿ.ಕೆ ಶಿವಕುಮಾರ್
  • ಬೆಂಗಳೂರು ನಗರ

ಈ ಸಾವುಗಳಿಗೆ ಯಾರು ಹೊಣೆ? ಈ ಸರ್ಕಾರ ನಂಬಿಕೆ ಕಳೆದುಕೊಂಡಿದೆ: ಡಿ.ಕೆ ಶಿವಕುಮಾರ್

The Bengaluru Live May 3, 2021 6:00 PM 1 minute read
ಈ ಸಾವುಗಳಿಗೆ ಯಾರು ಹೊಣೆ? ಈ ಸರ್ಕಾರ ನಂಬಿಕೆ ಕಳೆದುಕೊಂಡಿದೆ: ಡಿ.ಕೆ ಶಿವಕುಮಾರ್

ಈ ಸಾವುಗಳಿಗೆ ಯಾರು ಹೊಣೆ? ಈ ಸರ್ಕಾರ ನಂಬಿಕೆ ಕಳೆದುಕೊಂಡಿದೆ: ಡಿ.ಕೆ ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

‘ಆಕ್ಸಿಜನ್ ಕೊರತೆಯಿಂದ 24 ಜನರ ಸಾವಿಗೆ ಹೊಣೆಯಾರು? ಇವರನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಹೇಗೆ ಧೈರ್ಯ ತುಂಬಬೇಕು ಎಂಬುದೇ ತೋಚುತ್ತಿಲ್ಲ. ಈ ಸರ್ಕಾರ ನಂಬಿಕೆ ಕಳೆದುಕೊಂಡಿದ್ದು, ಮುಖ್ಯಕಾರ್ಯದರ್ಶಿಗಳನ್ನು ಭೇಟಿ ಮಾಡಿ ಜನರಿಗೆ ವಾಸ್ತವಾಂಶ ತಿಳಿಸಿ ಎಂದು ಮಾಡಿಕೊಳ್ಳುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಹೇಳಿದ್ದಿಷ್ಟು:

ಇದು ಪ್ರಚಾರ ಪ್ರಿಯ ಸರ್ಕಾರ. ಆಕ್ಸಿಜನ್ ವಿಚಾರದಲ್ಲಿ ಯಾರೂ ಮೇಲ್ವಿಚಾರಣೆ ಮಾಡುತ್ತಿಲ್ಲ. ನಮ್ಮ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು ಎಂದು ಹೇಳಿದ್ದರು. ಅವರಿಗೆ ಮುಖ್ಯಮಂತ್ರಿಗಳು ಸಮಯಾವಕಾಶ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ಈ ಸರ್ಕಾರದಿಂದಾಗಲಿ ಮುಖ್ಯಮಂತ್ರಿಗಳಿಂದಾಗಲಿ, ಮಂತ್ರಿಗಳಿಂದಾಗಲಿ ಈ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ. ಅವರ ಆದ್ಯತೆಗಳೇ ಬೇರೆ. ನಮ್ಮ ಮರ್ಯಾದೆ ಹೋದರೂ ಪರವಾಗಿಲ್ಲ, ಶಾಸಕಾಂಗ ಪಕ್ಷದ ಸಭೆ ನಂತರ ನಾನೇ ಮುಖ್ಯಕಾರ್ಯದರ್ಶಿಗಳ ಸಮಾಯಾವಕಾಶ ಕೇಳಿ ಅವರು ಎಲ್ಲಿರುತ್ತಾರೋ ಅಲ್ಲಿಗೇ ಹೋಗಿ ಭೇಟಿ ಮಾಡಿ ಈ ರಾಜ್ಯದ ಜನತೆಗೆ ವಾಸ್ತವಾಂಶ ಏನಿದೆ ಎಂದು ತಿಳಿಸಲು ಕೇಳಿಕೊಳ್ಳುತ್ತೇನೆ.

ನನಗೆ ಬರುತ್ತಿರುವ ಕರೆಗಳನ್ನು ಸ್ವೀಕರಿಸಲು ನನಗೆ ಸಾಧ್ಯವಾಗುತ್ತಿಲ್ಲ. ಅವರನ್ನು ಎಲ್ಲಿಗೆ ಕಳುಹಿಸಬೇಕು, ಯಾರನ್ನು ಸಂಪರ್ಕಿಸಬೇಕು ಎಂಬುದು ತೋಚುತ್ತಿಲ್ಲ. ಜನ ಆಕ್ಸಿಜನ್ ಮಟ್ಟದ ಕುಸಿತದಿಂದ ಆತಂಕಕ್ಕೆ ಸಿಲುಕಿದ್ದಾರೆ. ನಮಗೆ ಮುಖ್ಯಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳ ಬದ್ಧತೆ ಬಗ್ಗೆ ಪ್ರಶ್ನೆ ಇಲ್ಲ. ಆದರೆ ಜನರಿಗೆ ವಾಸ್ತವಾಂಶವನ್ನು ನೀವಾದರೂ ತಿಳಿಸಿ. ತಜ್ಞರು ಎಂದು ಇಟ್ಟುಕೊಂಡಿರುವವರು ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಪರಿಸ್ಥಿತಿ ನಿಭಾಯಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಿ.

ಈ ಸಮಯದಲ್ಲಿ ನಾನು ಉದ್ಯಮಿಗಳು, ಸಂಘ-ಸಂಸ್ಥೆಗಳಿಗೆ ಮನವಿ ಮಾಡುತ್ತೇನೆ. ಜನರ ಜೀವ ಉಳಿಸಲು ನಿಮ್ಮ ಕೈಯಲ್ಲಿ ಎಷ್ಟು ಸಾಧ್ಯವೋ ಅಷ್ಟು ನೆರವು ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ.

ಹೊರ ರಾಜ್ಯಗಳಲ್ಲಿ ಅಭಾವ ನೀಗಿಸಲು ಹೊರ ದೇಶಗಳಿಂದ ತರಿಸುತ್ತಿದ್ದಾರೆ. ಹುಟ್ಟಿದ ಮಗುವಿಗೆ ಮೊದಲು ಬೇಕಾಗಿರುವುದು ಉಸಿರಾಡುವ ಗಾಳಿ. ಜನ ಆ ಆಕ್ಸಿಜನ್ ಕೇಳಿದರೆ ಅದನ್ನು ಕೊಡಲು ಈ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಇದನ್ನೆಲ್ಲ ನೋಡುವಂತಹ ಶಿಕ್ಷೆ ಭಗವಂತ ನಮಗೆ ಯಾಕೆ ಕೊಡುತ್ತಿದ್ದಾನೆ ಅಂತಾ ನೋವಾಗುತ್ತಿದೆ.

ಮಳವಳ್ಳಿಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ? ಈ ಸಾವಿಗೆ ಸರ್ಕಾರವೇ ಹೊಣೆ ಹೊರಬೇಕು. ಸರ್ಕಾರ ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ ಎನ್ನುತ್ತಿದೆ ಎಂದರೆ ಮಾಧ್ಯಮಗಳು ಸುಳ್ಳು ವರದಿ ಪ್ರಸಾರ ಮಾಡಿವೆಯೇ? ನೀವು ತಪ್ಪು ಮಾಡಿದ್ದೀರಾ? ಅಥವಾ ಸರ್ಕಾರ ತಪ್ಪು ಮಾಡುತ್ತಿದೆಯಾ? ಇದೇ ಕಾರಣಕ್ಕೆ ಜನರಿಗೆ ವಾಸ್ತವಾಂಶ ತಿಳಿಸಿ ಎಂದು ಹೇಳುತ್ತಿದ್ದೇನೆ.

ಯಾರಿಗೆ ಆಗಲಿ ಪೂರ್ವ ಸಿದ್ಧತೆ, ಹೊಣೆಗಾರಿಕೆ ಇರಬೇಕು. ಇದ್ಯಾವುದು ಈ ಸರ್ಕಾರದಲ್ಲಿಲ್ಲ. ಆಕ್ಸಿಜನ್ ಕೊರತೆಯಿಂದ ಸತ್ತಿರುವ 24 ಜನರ ಕುಟುಂಬದ ಸದಸ್ಯರಿಗೆ ಯಾವ ರೀತಿ ಶಕ್ತಿ ತುಂಬಬೇಕೋ ತೋಚುತ್ತಿಲ್ಲ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿ ಎಂದು ನಾನು ಪಕ್ಷದ ಜಿಲ್ಲಾ ಸಮಿತಿಗೆ ಮನವಿ ಮಾಡುತ್ತೇನೆ.’

About the Author

The Bengaluru Live

Administrator

Visit Website View All Posts

Post navigation

Previous: ಆಮ್ಲಜನಕ ಇಲ್ಲದ ಅವಧಿಯಲ್ಲಿ 3 ಸಾವು ಮಾತ್ರ – ಸುಧಾಕರ್
Next: ಕೊರೊನಾ ಸೋಂಕು ನಿವಾರಣೆಗೆ ರಾಸಾಯನಿಕ ದ್ರಾವಣ

Related Stories

ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ

The Bengaluru Live November 17, 2026 5:24 PM
ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ದೀಪದ ಬಳಿ ವೇದಿಕೆಯ ಮೇಲೆ ನಿಂತಿರುವ ಗಣ್ಯರು
  • ಕರ್ನಾಟಕ
  • ಬೆಂಗಳೂರು ನಗರ

ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ

The Bengaluru Live November 17, 2026 5:15 PM

Latest Post

ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ

November 17, 2026 6:52 PM
ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

November 17, 2026 6:07 PM
ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ

November 17, 2026 5:24 PM
ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ದೀಪದ ಬಳಿ ವೇದಿಕೆಯ ಮೇಲೆ ನಿಂತಿರುವ ಗಣ್ಯರು
  • ಕರ್ನಾಟಕ
  • ಬೆಂಗಳೂರು ನಗರ

ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ

November 17, 2026 5:15 PM
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ: ಮುಖ್ಯಮಂತ್ರಿ ಶಿವಕುಮಾರ್ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಹಿನ್ನೆಲೆ ಫಲಕದ ಮುಂದೆ ನಿಂತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ
  • ಬೆಂಗಳೂರು ನಗರ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ: ಮುಖ್ಯಮಂತ್ರಿ ಶಿವಕುಮಾರ್

November 17, 2026 5:14 PM
ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ ಫೋನ್-ಇನ್ ಕಾರ್ಯಕ್ರಮದ ವೇಳೆ ಸಭೆ ಮೇಜಿನ ಬಳಿ ಟೇಬಲ್ ಫೋನ್‌ನಲ್ಲಿ ಮಾತನಾಡುತ್ತಿರುವ ವ್ಯಕ್ತಿ ಮತ್ತು ಪಕ್ಕದಲ್ಲಿ ಕುಳಿತಿರುವ ಮಹಿಳೆ
  • ಬೆಂಗಳೂರು ನಗರ

ಬೆಂಗಳೂರು ಉತ್ತರ ನಗರ ಪಾಲಿಕೆಯ ಮಂಗಳವಾರದ ಘನತ್ಯಾಜ್ಯ ಫೋನ್-ಇನ್‌ನಲ್ಲಿ 10 ಅಹವಾಲು ದಾಖಲು; ಒಂದು ಬಗೆಹರಿಕೆ

November 17, 2026 1:53 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ

The Bengaluru Live November 17, 2026 6:52 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ

The Bengaluru Live November 17, 2026 5:24 PM
ಕಾಮನ್‌ವೆಲ್ತ್ ಮಹಿಳಾ ಸಂಸದೀಯಪಟುಗಳ ಭಾರತ ವಲಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ದೀಪದ ಬಳಿ ವೇದಿಕೆಯ ಮೇಲೆ ನಿಂತಿರುವ ಗಣ್ಯರು
  • ಕರ್ನಾಟಕ
  • ಬೆಂಗಳೂರು ನಗರ

ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ

The Bengaluru Live November 17, 2026 5:15 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಹೊಸಕೋಟೆ ನಿವೇಶನ ಹಂಚಿಕೆದಾರರ ಪರ್ಯಾಯ ನಿವೇಶನ ಸಮಸ್ಯೆ: ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ನಿರ್ದೇಶನ, ರಾಜೀವ್ ಗಾಂಧಿ ವಸತಿ ನಿಗಮದ ಎಂಡಿ ಹಾಜರಿಗೆ ಸೂಚನೆ
  • ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ
  • ರಾಜರಾಜೇಶ್ವರಿನಗರದ ಅನಧಿಕೃತ ಮಹಡಿಗಳ ಬಗ್ಗೆ ನಿರ್ಲಕ್ಷ್ಯ: ಅಧಿಕಾರಿಗಳ ಹೊಣೆಗಾರಿಕೆ ನಿಗದಿಪಡಿಸಲು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ನಿರ್ದೇಶನ
  • ಮಹಿಳೆಯರಿಗೆ ಶೇ. 33 ಮೀಸಲಾತಿಗೆ ನಿಗದಿತ ಕಾಲಮಿತಿಯ ಯೋಜನೆ ರೂಪಿಸಲು ಕೇಂದ್ರಕ್ಕೆ ಡಿಸಿಎಂ ಪರಮೇಶ್ವರ ಆಗ್ರಹ
©Copyright 2025 The Bengaluru Live All rights reserved. | MoreNews by AF themes.