Home ರಾಜಕೀಯ HDK Vs IPS M Chandrasekhar | ಏನ್ ಮಾಡಬೇಕು, ಲೀಗಲ್ ಆಗಿ ಮಾಡುತ್ತೀವಿ: ರಾಜ್ಯ...

HDK Vs IPS M Chandrasekhar | ಏನ್ ಮಾಡಬೇಕು, ಲೀಗಲ್ ಆಗಿ ಮಾಡುತ್ತೀವಿ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದ ಭೇಟಿ ಮಾಡಿದ ಬಳಿಕ ಲೋಕಾಯುಕ್ತ SIT ಎಡಿಜಿಪಿ ಎಂ.ಚಂದ್ರಶೇಖರ್ ಅವರ ಮಾತು

72
0
Will do it legally: Lokayukta SIT ADGP M. Chandrasekhar speaks after meeting Chief Secretary Shalini Rajneesh

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ SIT ಎಡಿಜಿಪಿ ಎಂ.ಚಂದ್ರಶೇಖರ್ ಅವರು ಇಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ವಿವರಣೆ ಕೊಟ್ಟಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಚಂದ್ರಶೇಖರ್: “ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು ಎಂದು ಹೇಳಿದ್ದೇನೆ. ಎಲ್ಲಿ ಧರ್ಮ ಇರುತ್ತದೋ, ಅಲ್ಲಿ ಜಯ ಇರುತ್ತದೆ. ನಾವು ಏನ್ ಮಾಡಬೇಕು, ಲೀಗಲ್ ಆಗಿ ಮಾಡುತ್ತೀವಿ,” ಎಂದು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ನೇತೃತ್ವದ ಶಾಸಕರ ನಿಯೋಗ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ, ಕಳಂಕಿತ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿತ್ತು. ಅವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಿ ಉನ್ನತಮಟ್ಟದ ತನಿಖೆ ನಡೆಸಬೇಕು.

LEAVE A REPLY

Please enter your comment!
Please enter your name here