ಬೆಂಗಳೂರು:
ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮತಹಕ್ಕು ಚಲಾಯಿಸಿದರು.
ಮತದಾನ ಗಣತಂತ್ರದ ಹಬ್ಬ,
— Siddaramaiah (@siddaramaiah) May 10, 2023
ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನು ಸದೃಢಗೊಳಿಸೋಣ.
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ, ಕೋಮುವಾದ, ಬೆಲೆ ಏರಿಕೆಗಳ ವಿರುದ್ಧ ವರುಣಾ ವಿಧಾನಸಭಾ ಕ್ಷೇತ್ರದ ನನ್ನ ಹುಟ್ಟೂರು ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದೆ.
ನೀವೂ ತಪ್ಪದೆ ಮತದಾನ ಮಾಡಿ, ಕರ್ನಾಟಕವನ್ನು… pic.twitter.com/Wg0LpsTFfc
#WATCH | "There is a tremendous response from the voters. I will get more than 60 % of the votes. Congress will form the government on its own. I am not going to retire but I will not contest elections. This is my last election," says Former Karnataka CM and Congress leader… pic.twitter.com/ZVdz5o9gIW
— ANI (@ANI) May 10, 2023
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡುವ ಪಕ್ಷಕ್ಕೆ ಮತ ನೀಡುವಂತೆ ಮತದಾರರಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ರಾಷ್ಟ್ರದ ಭವಿಷ್ಯ ಈ ಚುನಾವಣೆಯಲ್ಲಿ ಅಡಗಿದೆ. ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ವಿಶ್ವಾಸವಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಈ ಸಂಖ್ಯೆ 150ಕ್ಕೆ ಹೋದರೂ ಹೋಗಬಹುದು ಎಂದು ಹೇಳಿದರು.
ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸ ನನಗಿದೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ರಾಜಕೀಯದಿಂದ ನಾನು ನಿವೃತ್ತಿಯಾಗುವುದಿಲ್ಲ. ಆದರೆ, ಮುಂಬರವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ತಿಳಿಸಿದರು.