Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಇನ್ನು ಕೆಲವೇ ದಿನಗಳಲ್ಲಿ ವಿಸ್ಟ್ರಾನ್‌ ಕಂಪನಿಯ ಉತ್ಪಾದನೆ ಪುನರಾರಂಭ: ಜಗದೀಶ್‌ ಶೆಟ್ಟರ್‌
  • ಬೆಂಗಳೂರು ನಗರ
  • ಕೋಲಾರ

ಇನ್ನು ಕೆಲವೇ ದಿನಗಳಲ್ಲಿ ವಿಸ್ಟ್ರಾನ್‌ ಕಂಪನಿಯ ಉತ್ಪಾದನೆ ಪುನರಾರಂಭ: ಜಗದೀಶ್‌ ಶೆಟ್ಟರ್‌

The Bengaluru Live February 18, 2021 6:55 PM
ಇನ್ನು ಕೆಲವೇ ದಿನಗಳಲ್ಲಿ ವಿಸ್ಟ್ರಾನ್‌ ಕಂಪನಿಯ ಉತ್ಪಾದನೆ ಪುನರಾರಂಭ: ಜಗದೀಶ್‌ ಶೆಟ್ಟರ್‌

ಇನ್ನು ಕೆಲವೇ ದಿನಗಳಲ್ಲಿ ವಿಸ್ಟ್ರಾನ್‌ ಕಂಪನಿಯ ಉತ್ಪಾದನೆ ಪುನರಾರಂಭ: ಜಗದೀಶ್‌ ಶೆಟ್ಟರ್‌

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಸಂಕಷ್ಟದ ಸಮಯದಲ್ಲಿ ವಿಸ್ಟ್ರಾನ್‌ ಕಂಪನಿಗೆ ರಾಜ್ಯ ಸರಕಾರ ನೀಡಿದ ಸಹಕಾರಕ್ಕೆ ಧನ್ಯವಾದ ತಿಳಿಸಿದ ಕಂಪನಿ ಪ್ರತಿನಿಧಿಗಳು

ಬೆಂಗಳೂರು:

ಕೋಲಾರದ ವಿಸ್ಟ್ರಾನ್‌ ಕಂಪನಿಯು ಇನ್ನು ಕೆಲವೇ ದಿನಗಳಲ್ಲಿ ಉತ್ಪಾದನಾ ಕಾರ್ಯವನ್ನು ಪುನರಾರಂಭಿಸಲಿರುವುದು ಸಂತಸದ ವಿಷಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.

ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ವಿಸ್ಟ್ರಾನ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸುದಿಪ್ತೋ ಗುಪ್ತಾ ನೇತೃತ್ವದ ತಂಡ, ಸಂಕಷ್ಟದ ಸಮಯದಲ್ಲಿ ರಾಜ್ಯ ಸರಕಾರದ ಅದರಲ್ಲೂ ಕೈಗಾರಿಕಾ ಇಲಾಖೆಯ ವತಿಯಿಂದ ದೊರೆತ ಸಹಾಯಕ್ಕೆ ಧನ್ಯವಾದಗಳನ್ನು ತಿಳಿಸಿದರು. ಇದೇ ವೇಳೆ ವಿಸ್ಟ್ರಾನ್‌ ನಲ್ಲಿ ಮರು ನೇಮಕಾತಿಯನ್ನು ಪ್ರಾರಂಭಿಸಲಾಗಿದೆ. ಅಲ್ಲದೆ ಕಂಪನಿಯಲ್ಲಿ ಉತ್ಪಾದನೆಗೆ ಬೇಕಾಗಿರುವ ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಉತ್ಪಾದನಾ ಕಾರ್ಯ ಸದ್ಯದಲ್ಲೇ ಪುನರಾರಂಭವಾಗಲಿದೆ ಎಂದು ಹೇಳಿದರು.

ನಂತರ ಮಾತನಾಡಿದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಜಗದೀಶ್‌ ಶೆಟ್ಟರ್‌, ಅಂತಹ ಘಟನೆ ನಡೆದಿದ್ದು ಬಹಳ ವಿಷಾಧನೀಯ. ಆದರೆ, ಕೈಗಾರಿಕಾ ಸ್ನೇಹೀ ರಾಜ್ಯವಾಗಿರುವ ಕರ್ನಾಟಕ ರಾಜ್ಯ ಮೊದಲಿನಿಂದಲೂ ಕೈಗಾರಿಕೆಗಳಿಗೆ ಪೂರಕ ವಾತಾವರಣವನ್ನು ನಿರ್ಮಿಸಲು ಶ್ರಮಿಸುತ್ತಿದೆ. ಆ ಘಟನೆಯ ನಂತರ ಮರು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿರುವುದು ಹಾಗೂ ಉತ್ಪಾದನೆ ಪುನರಾರಂಭಕ್ಕೆ ಸಿದ್ದತೆ ನಡೆಸಿರುವುದು ಸಂತಸದ ವಿಷಯವಾಗಿದೆ. ರಾಜ್ಯ ಸರಕಾರ ಹಾಗೂ ಕೈಗಾರಿಕಾ ಇಲಾಖೆಯ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ಮುಂದುವರೆಸಲಾಗುವುದು ಎಂದರು. ಅಲ್ಲದೆ, ರಾಜ್ಯದ ಇತರೆ ಜಿಲ್ಲೆಗಳಲ್ಲೂ ಉದ್ಯೋಗ ನೇಮಕಾತಿ ಮಾಡಿಕೊಳ್ಳುವ ಸಲಹೆಯನ್ನು ನೀಡಿದರು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್‌ ಕೃಷ್ಣ ಹಾಗೂ ವಿಸ್ಟ್ರಾನ್‌ ಕಂಪನಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಕಲ್ಯಾಣ ಕರ್ನಾಟಕ ಭಾಗಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾವನೆ – ಸುರೇಶ್ ಕುಮಾರ್
Next: ದೇಶದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆ – ಸದಾನಂದ ಗೌಡ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ಪ್ರಹ್ಲಾದ ಜೋಶಿಗೆ ರಿಜ್ವಾನ್ ಅರ್ಷದ್ ಪ್ರತಿಕ್ರಿಯೆ: ಇ20 ಪೆಟ್ರೋಲ್‌ನ ಸ್ವತಂತ್ರ ಪರೀಕ್ಷೆಗೆ ಆಗ್ರಹ ಮೈಕ್ರೋಫೋನ್‌ಗಳ ನಡುವೆ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವ ರಿಜ್ವಾನ್ ಅರ್ಷದ್
  • ಕರ್ನಾಟಕ
  • ರಾಜಕೀಯ

ಪ್ರಹ್ಲಾದ ಜೋಶಿಗೆ ರಿಜ್ವಾನ್ ಅರ್ಷದ್ ಪ್ರತಿಕ್ರಿಯೆ: ಇ20 ಪೆಟ್ರೋಲ್‌ನ ಸ್ವತಂತ್ರ ಪರೀಕ್ಷೆಗೆ ಆಗ್ರಹ

November 11, 2026 10:33 AM
ಆರ್‌ಎಸ್‌ಎಸ್ ಮತ್ತು ಕಾರ್ಟ್ರಿಡ್ಜ್ ವಶದ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್‌ಗೆ ಆಗ್ರಹ ಸಮಾವೇಶದ ವೇದಿಕೆಯಲ್ಲಿ ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಆರ್‌ಎಸ್‌ಎಸ್ ಮತ್ತು ಕಾರ್ಟ್ರಿಡ್ಜ್ ವಶದ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

November 11, 2026 9:55 AM
ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

November 11, 2026 8:20 AM
ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ರಾಜಕೀಯ
  • ಕರ್ನಾಟಕ

ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

November 11, 2026 7:23 AM
ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

November 11, 2026 1:28 AM
ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಬಿಹಾರ ಕಾರ್ಟ್ರಿಡ್ಜ್ ವಶ ಪ್ರಕರಣದ ಚಿತ್ರಕ್ಕೆ ಆಕ್ಷೇಪ: ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ, ಗಿರೀಶ್ ಭಾರದ್ವಾಜ್ ವಾಗ್ದಾಳಿ

November 11, 2026 1:14 AM

ನೀವು ತಪ್ಪಿಸಿಕೊಂಡಿರಬಹುದು

ಮೈಕ್ರೋಫೋನ್‌ಗಳ ನಡುವೆ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವ ರಿಜ್ವಾನ್ ಅರ್ಷದ್
  • ಕರ್ನಾಟಕ
  • ರಾಜಕೀಯ

ಪ್ರಹ್ಲಾದ ಜೋಶಿಗೆ ರಿಜ್ವಾನ್ ಅರ್ಷದ್ ಪ್ರತಿಕ್ರಿಯೆ: ಇ20 ಪೆಟ್ರೋಲ್‌ನ ಸ್ವತಂತ್ರ ಪರೀಕ್ಷೆಗೆ ಆಗ್ರಹ

The Bengaluru Live November 11, 2026 10:33 AM
ಸಮಾವೇಶದ ವೇದಿಕೆಯಲ್ಲಿ ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಆರ್‌ಎಸ್‌ಎಸ್ ಮತ್ತು ಕಾರ್ಟ್ರಿಡ್ಜ್ ವಶದ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

The Bengaluru Live November 11, 2026 9:55 AM
ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಕೊಚ್ಚಿಯ ಮುಸ್ಲಿಂ ಯೂತ್ ಲೀಗ್ ರ‍್ಯಾಲಿಯಲ್ಲಿ ವೇದಿಕೆಯಲ್ಲಿ ಸಂವಿಧಾನದ ಪ್ರತಿ ಹಿಡಿದು ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ರಾಜಕೀಯ
  • ಕರ್ನಾಟಕ

ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

The Bengaluru Live November 11, 2026 7:23 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಪ್ರಹ್ಲಾದ ಜೋಶಿಗೆ ರಿಜ್ವಾನ್ ಅರ್ಷದ್ ಪ್ರತಿಕ್ರಿಯೆ: ಇ20 ಪೆಟ್ರೋಲ್‌ನ ಸ್ವತಂತ್ರ ಪರೀಕ್ಷೆಗೆ ಆಗ್ರಹ
  • ಆರ್‌ಎಸ್‌ಎಸ್ ಮತ್ತು ಕಾರ್ಟ್ರಿಡ್ಜ್ ವಶದ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
  • ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ
  • ತೇಜಸ್ವಿ ಸೂರ್ಯ ಸಾಕ್ಷ್ಯ ಕೇಳಿದ ಬೆನ್ನಲ್ಲೇ ಆರ್‌ಎಸ್‌ಎಸ್‌ಗೆ ನೋಂದಣಿ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ
©Copyright 2025 The Bengaluru Live All rights reserved. | MoreNews by AF themes.