Home ರಾಜಕೀಯ ರೇವಣ್ಣನನ್ನು 5 ದಿನ ಎಸ್​ಐಟಿ ಕಸ್ಟಡಿಗೆ ನೀಡಿದ ಕೋರ್ಟ್

ರೇವಣ್ಣನನ್ನು 5 ದಿನ ಎಸ್​ಐಟಿ ಕಸ್ಟಡಿಗೆ ನೀಡಿದ ಕೋರ್ಟ್

39
0
HD Revanna arrested

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಹೆಚ್ ಡಿ ರೇವಣ್ಣನನ್ನು 5 ದಿನ ಎಸ್​ಐಟಿ ಕಸ್ಟಡಿಗೆ 17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಆದೇಶ ನೀಡಿದೆ.

ಇಂದು ರೇವಣ್ಣನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯ್ತು. ಇವತ್ತು ಭಾನುವಾರ ಆಗಿದ್ದರಿಂದ ಕೋರಮಂಗದಲ್ಲಿರುವ ನಿವಾಸದಲ್ಲೇ 17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ​ ಮುಂದೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಧೀಶರು ಆರೋಪ ರೇವಣ್ಣ ಅವರನ್ನು ಐದು ದಿನ ಎಸ್​​ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ. ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದೆ. ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ 20 ವರ್ಷದ ಪುತ್ರ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು.

ಮಹಿಳೆಯ ಪತ್ತೆಗಾಗಿ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಲಾಗಿತ್ತು. ಇನ್ನು ಕಿಡ್ನ್ಯಾಪ್ ಆದ ಮಹಿಳೆ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದು. ಬಳಿಕ ಎಸ್​ಐಟಿ ಅಧಿಕಾರಿಗಳು ಮಹಿಳೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ವಿಚಾರಣೆಗೊಳಪಡಿಸಿದ್ದಾರೆ. ಆದ್ರೆ, ಮಹಿಳೆ ಎಸ್​ಐಟಿ ಅಧಿಕಾರಿಗಳ ಮುಂದೆ ಗೊಂದಲದ ಹೇಳಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here