Home ಬೆಂಗಳೂರು ನಗರ ಮನುಕುಲಕ್ಕೆ ಮಹಿಳೆಯರೇ ಶಕ್ತಿ – ತೇಜಸ್ವಿ ಸೂರ್ಯ

ಮನುಕುಲಕ್ಕೆ ಮಹಿಳೆಯರೇ ಶಕ್ತಿ – ತೇಜಸ್ವಿ ಸೂರ್ಯ

16
0
Women are power for mankind: Tejasvi Surya
bengaluru

ಬೆಂಗಳೂರು:

ಕೇಂದ್ರ ಸರ್ಕಾರವು ಮಹಿಳೆಯರ ಅಭಿವೃದ್ಧಿಗಾಗಿ ಮಹಿಳಾ ಕೇಂದ್ರಿತಾ ಹಾಗೂ ಮಹಿಳಾ ನೇತೃತ್ವದ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದು, ಸಮಾಜದಲ್ಲಿ ಮಹಿಳೆಯರನ್ನು ಮುಖ್ಯ ವಾಹಿನಿಗೆ ತರುವುದು ಸರ್ಕಾರದ ಉದ್ದೇಶವಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯರಾದ ತೇಜಸ್ವಿ ಸೂರ್ಯ ತಿಳಿಸಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯಾ ಗ್ರಾಮೀಣ ಜೀವನೋಪಾಯ ಅಭಿಯಾನ ಸಹಯೋಗದಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸ್ತ್ರೀ ಶಕ್ತಿ ಸಂಘದ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತಾನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳೇ ಸಂದಿದ್ದು ಬ್ಯಾಂಕ್ ಖಾತೆ ತೆರೆಯುವ ಬಗ್ಗೆ ಅರಿವೇ ಇರಲಿಲ್ಲ ಆದರೆ ಇಂದು ಮಹಿಳೆಯರು ಬ್ಯಾಂಕ್ ಖಾತೆ ತೆರೆಯುವುದರ ಜೊತೆಗೆ ಶೇ.70 ರಷ್ಟು ಖಾತೆಗಳನ್ನು ಹೊಂದಿದ್ದಾರೆ. ಪ್ರಧಾನ ಮಂತ್ರಿಯವರು ಮಹಿಳೆಯರ ಬಗೆಗಿನ ಭರವಸೆಯಿಂದ ಮಹಿಳೆಯರಿಗಾಗಿ 2 ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸಿ ಮಹಿಳೆಯರನ್ನೇ ಒಡತಿಯರನ್ನಾಗಿಸಿದ್ದಾರೆ. ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಸ್ವ ಸಹಾಯ ಸಂಘಗಳಲ್ಲಿ ಸಾಲ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಿದ್ದು ಶೇ . 99 ರಷ್ಟು ಮರುಪಾವತಿ ಯಾಗಿರುವುದು ಮಹಿಳೆಯರಿಗೆ ಇರುವ ಪ್ರಭುದ್ಧತೆ ಯನ್ನು ತೋರಿಸುತ್ತದೆ.

Women are power for mankind: Tejasvi Surya

ಬೆಂಗಳೂರು ನಗರದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಡಿ. ಸಿ .ಸಿ ಬ್ಯಾಂಕ್ ಮೂಲಕ 20 ಕೋಟಿಗೂ ಹೆಚ್ಚು ಸಾಲ ನೀಡುವ ಚಿಂತನೆ ನಡೆದಿದೆ ಎಂದರು. ಕಳೆದ ವರ್ಷ ಬೆಂಗಳೂರು ನಗರ ಜಿಲ್ಲೆಯ 2500ಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳಿಗೆ ಸುಮಾರು ರೂ 15 ಕೋಟಿ ಗಳ ಸಾಲ ನೀಡಲಾಗಿದೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಸುಮಾರು 3,15,000 ಶೂನ್ಯ ಖಾತೆಗಳಿದ್ದು ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಬಡ ಕುಟುಂಬದ ಮಹಿಳೆಯರು 103 ಕೋಟಿ ರೂ ಗಳನ್ನು ಠೇವಣಿ ಮಾಡಿರುವುದು ಒಂದು ಹೆಮ್ಮೆಯ ಸಂಗತಿಯಾಗಿದೆ ಎಂದರು .

bengaluru

ಬೆಂಗಳೂರು ನಗರ ಜಿಲ್ಲೆಯಲ್ಲಿ ಕಳೆದ ವರ್ಷ ಮಹಿಳೆಯರು ಸ್ವ ಉದ್ಯೋಗ ಆರಂಭಿಸಲು ಮುದ್ರಾ ಯೋಜನೆಯಡಿ 1078 ಕೋಟಿ ರೂ ಗಳ ಸಾಲ ಪಡೆದಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ಪಿ ಎಂ ಸ್ವ ನಿಧಿ ಯೋಜನೆಯಡಿ ತಲಾ 10,000 ರೂ ಗಳಂತೆ 15000 ಮಹಿಳೆಯರಿಗೆ 15 ಕೋಟಿ ರೂ ಗಳ ಸಾಲವನ್ನು ಈ ವರ್ಷದಲ್ಲೇ ನೀಡಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಹಕಾರ ಸಚಿವರಾದ ಎಸ್. ಟಿ ಸೋಮಶೇಖರ್ ರವರು ಮಾತನಾಡಿ 21 ಡಿ ಸಿ ಸಿ ಬ್ಯಾಂಕ್ ಗಳನ್ನು ಪ್ರಗತಿ ಪರಿಶೀಲನೆ ಮಾಡಲಾಗಿದ್ದು ಬೆಂಗಳೂರು ನಗರ ಜಿಲ್ಲೆಯಾ ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘಗಳಿಗೆ ಸುಮಾರು 20 ಕೋಟಿ ರೂ ಗಳ ಸಾಲ ನೀಡಲು ಹಾಗೂ ನೂರಕ್ಕೆ ನೂರರಷ್ಟು ಗುರಿ ಸಾಧಿಸಲು ಸೂಚಿಸಲಾಗಿದೆ ಎಂದರು . ಮುಂದಿನ ವರ್ಷ ಸುಮಾರು 33 ಲಕ್ಷ ರೈತರಿಗೆ 23 ಸಾವಿರ ಕೋಟಿ ರೂ ಗಳನ್ನು ನೀಡಲು ಮಾನ್ಯ ಮುಖ್ಯಮಂತ್ರಿ ಗಳು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯದಾದ್ಯಂತ ಮಿಲ್ಕ್ ಯೂನಿಯನ್ ಕೇಂದ್ರಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು ಈ ಕೇಂದ್ರಗಳಲ್ಲಿ ಮಹಿಳೆಯರು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಚಿಂತನೆ ನಡೆಸಲಾಗಿದೆ ಎಂದರು .

ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕರಾದ ಸಂಗಪ್ಪ ರವರು ಮಾತನಾಡಿ ಸುಸ್ಥಿರ ಅಭಿವೃದ್ಧಿಗೆ ಸಮಾನತೆಯ ಎಲ್ಲಾ ರಂಗಗಳಲ್ಲಿ ಬರಬೇಕು ಅದಕ್ಕಾಗಿ ಮಹಿಳೆಯರು ಪ್ರತಿಯೊಂದು ರಂಗದಲ್ಲಿ ಕ್ರಿಯಾಶೀಲರಾಗಬೇಕು ಎಂದರು .ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸ್ತ್ರೀ ಶಕ್ತಿ ಒಕ್ಕೂಟದ ಪದಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು,ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು,ಮುಖ್ಯ ಪುಸ್ತಕ ಬರಹಗಾರರು , ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು,ಬ್ಯಾಂಕ್ ಸಖಿಯರು ಹಾಗೂ ಕಲೆ ,ಕ್ರೀಡೆ ,ವಿಜ್ಞಾನ, ಸಾಮಾನ್ಯ ಜ್ಞಾನ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

bengaluru

LEAVE A REPLY

Please enter your comment!
Please enter your name here