ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಗಳಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.
ಯೋಜನೆಗಳು
- ಉದ್ಯೋಗಿನಿ
- ಧನಶ್ರೀ
- ಚೇತನಾ
- ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
ಅರ್ಜಿ ಸಲ್ಲಿಸುವುದು ಹೇಗೆ
ಆಸಕ್ತ ಮತ್ತು ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
