Home ಕೊಡಗು Yathindra will not contest Lok Sabha elections from Kodagu: Chief Minister Siddaramaiah|...

Yathindra will not contest Lok Sabha elections from Kodagu: Chief Minister Siddaramaiah| ಲೋಕಸಭಾ ಚುನಾವಣೆಯಲ್ಲಿ ಕೊಡಗಿನಿಂದ ಯತೀಂದ್ರ ಸ್ಪರ್ಧಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

17
0
Yathinda and Siddaramaiah
File Image

ಮಡಿಕೇರಿ (ವಿರಾಜಪೇಟೆ):

ಲೋಕಸಭಾ ಚುನಾವಣೆಯಲ್ಲಿ ಕೊಡಗಿನಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿರಾಜಪೆಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಪ್ರಶ್ನೆಯೊಂದಕ್ಕೆ ಉತ್ತರಿಸಿ: “ಯತೀಂದ್ರ ಸಿದ್ರಾಮಯ್ಯ ನಿಲ್ಲಲ್ಲ,” ಎಂದರು.

ಎಲ್ಲಾ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ

ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿರುವ ಬಗ್ಗೆ ಮಾತನಾಡಿ, ಅದನ್ನು ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ ಎಂದರು.

ಅಧ್ಯಕ್ಷರು, ಸಿಎಂ, ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ

ಸಚಿವ ಕೆ.ಎನ್ ರಾಜಣ್ಣ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಾವು ಗುಲಾಮರೇ ನಮ್ಮನ್ನು ಕೇಳದೇ ವರಿಷ್ಠರು ನಿರ್ಧಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಎಲ್ಲರೂ ಒಂದೊಂದು ಹೆಸರನ್ನು ಹೇಳಿದಾದ ಕಷ್ಟವಾಗುತ್ತದೆ. ಸಾಮಾನ್ಯವಾಗಿ ಈ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್: ಗಂಭೀರ ಪರಿಶೀಲನೆ

ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.

LEAVE A REPLY

Please enter your comment!
Please enter your name here