
Yatnal supporter arrested for waving sword (Talwar)
ವಿಜಯಪುರ:
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಸಂತೋಷದಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ವಿಜಯನಗರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣೆಯಲ್ಲಿ ಗೆಲ್ಲುತ್ತಿದ್ದಂತೆ ಖಡ್ಗವನ್ನು ಸಾರ್ವಜನಿಕವಾಗಿ ಝಳಪಿಸುತ್ತಾ ಬಂದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚು ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.