ಬೆಂಗಳೂರು;- ಗುತ್ತಿಗೆದಾರರ ನಿವಾಸದಲ್ಲಿ ಪತ್ತೆಯದ ಕೋಟಿ ಕೋಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣವನ್ನು ಇಡಿ ಮತ್ತು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಐಟಿ ದಾಳಿಯಲ್ಲಿ ಹಣ ಸಿಕ್ಕಿದ್ದ ಪ್ರಕರಣದಲ್ಲಿ ತನಿಖೆ ಬಳಿಕ ಹಣದ ಮೂಲ ಗೊತ್ತಾಗಲಿದೆ. ಚುನಾವಣೆಗೆ ಹಣ ಸಂಗ್ರಹ ಮಾಡಿರೋದು ನಿಜ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ನವರು ಚುನಾವಣೆಗೆ ಹಣ ಸಂಗ್ರಹ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇಡಿ ಮತ್ತು ಸಿಬಿಐ ತನಿಖೆ ಮಾಡಿದರೆ ವಾಸ್ತವಾಂಶ ಹೊರಗೆ ಬರಲಿದೆ. ಹಾಗಾಗಿ ನಾನೂ ಕೂಡ ಇಡಿ ತನಿಖೆಗೆ ಆಗ್ರಹ ಮಾಡುತ್ತೇನೆ ಎಂದರು.
ಎಲ್ಲೆಡೆ ವಿದ್ಯುತ್ ಕಣ್ಣಾಮುಚ್ಚಾಲೆ ಇದೆ. ಪಂಪ್ ಸೆಟ್ ಇರುವ ರೈತರು ಸಂಕಷ್ಟದಲ್ಲಿದ್ದಾರೆ. ಮತ್ತೊಂದು ಕಡೆ ಬೋರ್ವೆಲ್ನಿಂದ ಅಲ್ಪ ಸ್ವಲ್ಪ ಬೆಳೆ ಉಳಿಸೋಣ ಎನ್ನುವ ಚಿಂತನೆಯಲ್ಲಿದ್ದಾರೆ. ಆದರೆ, ವಿದ್ಯುತ್ ಪೂರೈಕೆಯಾಗದೇ ಸಂಪೂರ್ಣ ಬೆಳೆ ನಾಶವಾಗಿದೆ. ಸರ್ಕಾರ ಕೂಡಲೇ ಕೊನೇ ಪಕ್ಷ ಬೋರ್ವೆಲ್ಗಳಿಗೆ ವಿದ್ಯುತ್ ಕೊಡುವ ಕೆಲಸ ಮಾಡಬೇಕು. ಇದರಿಂದ ರೈತ ಉಳಿಯಬಹುದು. ಆ ದಿಕ್ಕಿನಲ್ಲಿ ಸರ್ಕಾರ ಯೋಚನೆ ಮಾಡಬೇಕು ಎಂದು ಬಿಎಸ್ವೈ ಒತ್ತಾಯಿಸಿದರು.
The post Yeddyurappa; ಚುನಾವಣೆಗೆ ಹಣ ಸಂಗ್ರಹ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ – ಯಡಿಯೂರಪ್ಪ appeared first on Ain Live News.