Home ರಾಜಕೀಯ ಶಿರಾ, ಆರ್.ಆರ್. ನಗರದಲ್ಲಿ ಅರಳಿದ ಕಮಲ: ಹಿನ್ನೆಲೆಗೆ ಸರಿದ ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆ

ಶಿರಾ, ಆರ್.ಆರ್. ನಗರದಲ್ಲಿ ಅರಳಿದ ಕಮಲ: ಹಿನ್ನೆಲೆಗೆ ಸರಿದ ಯಡಿಯೂರಪ್ಪ ನಾಯಕತ್ವ ಬದಲಾವಣೆ ಪ್ರಶ್ನೆ

49
0

ಬೆಂಗಳೂರು:

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ.

ಶಿರಾದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು, ಆರ್.ಆರ್. ನಗರ ಕ್ಷೇತ್ರವನ್ನು ಕಾಂಗ್ರೆಸ್ ನಿಂದ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಈ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಲ ಬಂದಿದ್ದು, ನಾಯಕತ್ವ ಬದಲಾವಣೆ ಪ್ರಶ್ನೆ ಹಿನ್ನೆಲೆಗೆ ಸರಿದಿದೆ.

WhatsApp Image 2020 11 10 at 20.55.07

ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ 57,672 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಮುನಿರತ್ನ ಅವರು ಒಂದು 1,25,734 ಮತ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗೆ 67,7098, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಅವರಿಗೆ 10,251 ಮತಗಳು ಲಭಿಸಿವೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್‌ಗೌಡ 74,552 ಮತಗಳನ್ನು ಪಡೆದು, 12,949ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Rajesh Gowda 1

ಕಾಂಗ್ರೆಸ್‌ನ ಟಿ.ಬಿ. ಜಯಚಂದ್ರ ಅವರಿಗೆ 61,572 ಹಾಗೂ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೆ 35,982 ಮತಗಳು ಲಭಿಸಿವೆ.

ಇದೇ ೩ರಂದು ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು. ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ೮೫, ರಾಜರಾಜೇಶ್ವರಿನಗರದಲ್ಲಿ ಶೇಕಡ ೪೫ರಷ್ಟು ಮತದಾನವಾಗಿತ್ತು.

ಶಿರಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸತ್ಯನಾರಾಯಣ ಅವರ ನಿಧನದಿಂದ ಹಾಗೂ ರಾಜರಾಜೇಶ್ವರಿನಗರದಲ್ಲಿ ಮುನಿರತ್ನ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿತ್ತು.

ಗೆಲುವಿನ ನಂತರ ಶಿರಾ ಕ್ಷೇತ್ರದ ಅಭ್ಯರ್ಥಿ ಡಾ. ರಾಜೇಶ್ ಗೌಡ ಪ್ರತಿಕ್ರಿಯಿಸಿ, ಕಾರ್ಯಕರ್ತರು, ಮುಖಂಡರ ಸತತ ಪರಿಶ್ರಮ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳು ಗೆಲುವಿಗೆ ವರದಾನವಾಗಿದೆ. ತಮ್ಮ ಅವಧಿ ಬಹಳ ಕಡಿಮೆ ಇದ್ದು, ಕ್ಷೇತ್ರಕ್ಕೆ ಆಗಬೇಕಿರುವ ಬಾಕಿ ಕೆಲಸಗಳನ್ನು ತ್ವರಿತವಾಗಿ ಮಾಡಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ರಾಜೇಶ್ ಗೌಡ ಹೇಳಿದರು.

ಈ ನಡುವೆ ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪ್ರತಿಕ್ರಿಯಿಸಿ, ಕ್ಷೇತ್ರದ ಮತದಾರರ ಸೇವೆಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಹೇಳಿದ್ದಾರೆ.

ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಶಕ್ತಿಮೀರಿ ಪ್ರಯತ್ನ ಮಾಡುವುದಾಗಿ ತಿಳಿಸಿ, ಇದು ಕ್ಷೇತ್ರದ ಜನತೆಯ ಗೆಲುವು ಎಂದು ಮುನಿರತ್ನ ಹೇಳಿದ್ದಾರೆ.

ಫಲಿತಾಂಶ ಪ್ರಕಟಗೊಂಡ ನಂತರ ಮುನಿರತ್ನ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಗೆಲುವಿನ ಸಂತಸ ಹಂಚಿಕೊಂಡರು.

LEAVE A REPLY

Please enter your comment!
Please enter your name here