Home ರಾಜಕೀಯ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 140 ಶಾಸಕರ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ

ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 140 ಶಾಸಕರ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ

62
0

ಬೆಂಗಳೂರು:

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140ರಿಂದ 150 ಶಾಸಕರನ್ನು ಗೆಲ್ಲಿ ಸುವ ಗುರಿ ಇಟ್ಟುಕೊಳ್ಳಲಾಗುವುದು. ಇದಕ್ಕಾಗಿ ಪಕ್ಷ ಸಂಘಟಿಸಲು ಶೀಘ್ರವೇ ರಾಜ್ಯದಾದ್ಯಂತ ಪ್ರವಾಸ ಮಾಡಲಿ ದ್ದೇನೆ ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದ ಪ್ರೇರಣಾ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇ ಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,ಬೆಳಗಾವಿ ಲೋಕಸಭಾ ಕ್ಷೇತ್ರ,ಮಸ್ಕಿ ಮತ್ತು ಬಸ ವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವಿಗೆ ಗರಿಷ್ಠ ಶ್ರಮ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕೃಷಿಕರಿಗೆ ತೊಂದರೆಯಾಗುವ ಕಸ್ತೂರಿರಂಗನ್ ವರದಿ ಜಾರಿ ಬರಲು ಬಿಡುವುದಿಲ್ಲ.ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು,ಕಾನೂನು ಪ್ರಕಾರವೇ ಗ್ರಾಮ ಪಂಚಾಯತ್ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನದ ಆಯ್ಕೆ ನಡೆಯಲಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶ್ವದ ಅಗ್ರಗಣ್ಯ ನಾಯಕ ಎಂದು ಜಗತ್ತು ಒಪ್ಪಿಕೊಂಡಿದೆ.ದೇಶವನ್ನು ಮಾದರಿ ರಾಷ್ಟ್ರವನ್ನಾಗಿ ಮಾಡಲು ಶ್ರಮವಹಿಸಿರುವ ಅಗ್ರಗಣ್ಯ ನಾಯಕ ಮೋದಿ ಅವರು ಮತ್ತೊಂದು ಬಾರಿ ಪ್ರಧಾನಿಯಾಗಿ ದೇಶವನ್ನು ಅಗ್ರಗಣ್ಯ ರಾಷ್ಟವನ್ನಾಗಿ ಮಾಡಲಿ ಎಂದು ಆಶಿಸಿದರು.370ನೇ ವಿಧಿ ರದ್ದು,ಕೃಷಿ ಸುಧಾರಣಾ ಮಸೂದೆ ಜಾರಿ,ನಾಗರಿಕ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನದಂಥ ಮಹತ್ವದ ಯೋಜನೆಗ ಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ ಎಂದು ವಿವರಿಸಿದರು.

CM BSY Shimogga BJP2

ಇಬ್ಬರೇ ಶಾಸಕರಿದ್ದ ನಮ್ಮ ಪಕ್ಷ ಇವತ್ತು ಅಧಿಕಾರದಲ್ಲಿರಲು ಸಾವಿರಾರು ಜನ ಕಾರ್ಯಕರ್ತರ ತ್ಯಾಗ,ಬಲಿದಾ ನವೇ ಕಾರಣ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆ ಯಶಸ್ಸಿಗೆ ಸಾಮೂಹಿಕ ನೇತೃತ್ವ ಹಾಗೂ ಪರಿ ಶ್ರಮವೇ ಕಾರಣವಾಗಿದೆ. ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಯ ಶಸ್ಸಿನ ಮೇಲೆ ಮುಂದಿನ ವಿಧಾನಸಭಾ ಚುನಾವಣೆಯ ಫಲಿತಾಂಶ ನಿಂತಿದೆ.ಆದ್ದರಿಂದ ಅಲ್ಲಿ ನಾವು ಹೆಚ್ಚಿನ ಶ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕರ್ತರು ಮತ್ತು ಮುಖಂಡರು ಪಕ್ಷದ ಸಂಘಟನೆಗೆ ಕೆಲವು ವರ್ಷಗಳನ್ನಾದರೂ ನೀಡಬೇಕು.ಎರಡರಿಂ ದ ಮೂರು ಡಿಗ್ರಿ ಪಡೆದ ಆರೆಸ್ಸೆಸ್ ಪೂರ್ಣಾವಧಿ ಕಾರ್ಯಕರ್ತರ ಪ್ರೇರಣಾದಾಯಕ ಕಾರ್ಯವನ್ನು ನಾವು ಅನುಸರಿಸಬೇಕು ಎಂದು ಅವರು ಆಶಿಸಿದರು.

ಪಕ್ಷದ ಸಂಘಟನೆಯ ದೃಷ್ಟಿಯಿಂದ ಶಿವಮೊಗ್ಗ- ಬೆಂಗಳೂರಿಗೆ ನಡೆಸಿದ ಪಾದಯಾತ್ರೆಗಳು ಹಾಗೂ ಬಗರ್ ಹು ಕುಂ ಹೋರಾಟ ಮುಂತಾದ ಜನಪರ ಕಾರ್ಯಕ್ರಮಗಳನ್ನು ಜನಸಂಘದ ಕಾಲದಿಂದಲೇ ನಿರಂತರವಾಗಿ ನಡೆಸಿ ಕೊಂಡು ಬಂದಿರುವುದನ್ನು ಅವರು ನೆನಪಿಸಿದರು.ಅಂಡಮಾನ್ ಸೆಲ್ಯುಲರ್ ಜೈಲಿನಲ್ಲಿರುವ ವೀರ ದಾಮೋ ದರ್ ಸಾವರ್ಕರ್ ಅವರ ಜೀವನದರ್ಶನ,ಅವರ ತ್ಯಾಗ,ಅವರು ಅನುಭವಿಸಿದ ಅತ್ಯಂತ ಕಷ್ಟದ ಕರಿನೀರಿನ ಶಿಕ್ಷೆ ನಮ್ಮೆಲ್ಲರಿಗೂ ರಾಷ್ಟ್ರ ನಿರ್ಮಾಣದ ಈ ಪುಣ್ಯ ಕಾರ್ಯಕ್ಕೆ ನಿರಂತ ಪ್ರೇರಣೆ ಎಂದರು.ನಾವೆಲ್ಲರೂ ಒಂದು ಬಾರಿಯಾದರೂ ಈ ದೃಷ್ಟಿಯಿಂದ ಅಂಡಮಾನ್ ಸೆಲ್ಯುರ್ ಜೈಲಿಗೆ ಭೇಟಿ ನೀಡಬೇಕು ಎಂದು ಆಗ್ರಹಿಸಿದರು.

ಮುಂದಿನ ನಾಲ್ಕು ತಿಂಗಳುಗಳ ಬಳಿಕ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಪಕ್ಷ ದ ಚಿಹ್ನೆಯಡಿ ನಡೆಯಲಿದ್ದು,ಬಿಜೆಪಿ ಶೇ 80ರಷ್ಟು ಸ್ಥಾನಗಳನ್ನು ಗೆಲ್ಲಬೇಕಿದೆ.ಜನಸೇವಕ್ ಸಮಾವೇಶಗಳನ್ನು ಜನವರಿ 11,12,13ರಂದು ನಡೆಸಲಾಗುವುದು.ಮೈಸೂರಿನಲ್ಲಿ ಮುಖ್ಯಮಂತ್ರಿಗಳಿದ ಸಮಾವೇಶದ ಉದ್ಘಾಟನೆ ನೆರವೇರಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‌ಕುಮಾರ್ ಕುಮಾರ್ ಕಟೀಲ್ ಅವರು ತಿಳಿಸಿದರು.

ಗ್ರಾಮ ಸ್ವರಾಜ್ಯ ಸಮಾವೇಶಗಳು,ಕುಟುಂಬ ಸಮ್ಮಿಲನದಂಥ ಕಾರ್ಯಕ್ರಮಗಳಿಂದ ಪಕ್ಷದ 44 ಸಾವಿರ ಕಾರ್ಯ ಕರ್ತರು ಇದೀಗ ಪಂಚಾಯತ್ ಸದಸ್ಯರಾಗಿದ್ದಾರೆ.3,500 ಜನರು ಅಧ್ಯಕ್ಷರಾಗುವ ಕನಸು ನನಸಾಗಲಿದೆ.ಶೇ 60 ಪಂಚಾಯತ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರು ಗೆಲುವು ಸಾಧಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಅಭಿ ವೃದ್ಧಿ ಕಾರ್ಯಕ್ರಮಗಳು ಜನರನ್ನು ನೇರವಾಗಿ ತಲುಪಿವೆ.ಕೋವಿಡ್ ಮತ್ತು ನೆರೆಯ ಸವಾಲಿನ ಮಧ್ಯೆ ಸಮರ್ಥ ಆಡಳಿತ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೂ ನಮ್ಮ ಗೆಲುವಿಗೆ ಪೂರಕವಾಗಿದೆ ಎಂದು ವಿವರಿಸಿದರು.

CM BSY Shimogga BJP1

ಶಿವಮೊಗ್ಗವು ಸಂಘಟನೆಗೆ ಪ್ರೇರಣೆ ಕೊಟ್ಟ ಜಿಲ್ಲೆ.ಹಿಂದೂ ವಿಚಾರಧಾರೆಗೆ ಬೆಲೆ ಕೊಟ್ಟ ಜಿಲ್ಲೆ ಇದು ಎಂದು ಅವರು ಮೆಚ್ಚುಗೆ ಸೂಚಿಸಿದರು.

ರಾಷ್ಟಿಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿ ಆದ ಅರುಣ್ ಸಿಂಗ್,ರಾಷ್ಟಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ,ಕೇಂದ್ರ ಗಣಿ ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಷಿ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ,ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ‌ಕುಮಾರ್,ರಾಜ್ಯದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಶ್ರೀ ಲಕ್ಷ್ಮಣ ಸವದಿ,ರಾಜ್ಯ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಕಂದಾಯ ಸಚಿವ ಆರ್.ಅಶೋಕ್, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ,ಪಕ್ಷದ ಹಿರಿಯ ಮುಖಂಡ ಡಿ.ಎಚ್.ಶಂಕರಮೂರ್ತಿ,ಮುಖಂಡರು ,ಆಹ್ವಾನಿತರು ಭಾಗವಹಿಸಿದ್ದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಿದ್ದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭೂತಪೂರ್ವ ಜಯದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.
ಸಂಸದರಾದ ಬಿ.ವೈ.ರಾಘವೇಂದ್ರ ಅವರು ಸ್ವಾಗತಿಸಿದರು.ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರಸಿಂಹ ನಾಯಕ್ ಅವರು ಕಾರ್ಯಕ್ರಮ ನಿರ್ವಹಿಸಿದರು.ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಧನ್ಯವಾದ ಸಮರ್ಪಿಸಿದರು. UNI

LEAVE A REPLY

Please enter your comment!
Please enter your name here