Home ಹಾಸನ ಎತ್ತಿನ ಹೊಳೆ ಯೋಜನೆ 2ನೇ ಹಂತದ 33 ಕಿ.ಮೀ ಕಾಮಗಾರಿ ಶೀಘ್ರ ಪೂರ್ಣ: ರಮೇಶ್ ಜಾರಕಿಹೊಳಿ

ಎತ್ತಿನ ಹೊಳೆ ಯೋಜನೆ 2ನೇ ಹಂತದ 33 ಕಿ.ಮೀ ಕಾಮಗಾರಿ ಶೀಘ್ರ ಪೂರ್ಣ: ರಮೇಶ್ ಜಾರಕಿಹೊಳಿ

75
0

ಹಾಸನ:

ಎತ್ತಿನಹೊಳೆ ಯೋಜನೆಯ ಹಂತ 1 ಮತ್ತು 2 ಕಾಮಗಾರಿಗಳು 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಇದೇ ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವರಾದ ರಮೆಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಿಲ್ಲೆಯ ಬೇಲೂರು ತಾಲ್ಲೂಕಿನ ಬೆಟ್ಟದ ಆಲೂರು ಗ್ರಾಮದ ಬಳಿ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿ ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಅವರು ತಿಳಿಸಿದರು.

Yettinahole Project 33kms works to be completed shortly Ramesh Jarakiholli

ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ ಮೂಲಕ ಹರಿಸಲು ಯೋಜನೆಯನ್ನು ರೂಪಿಸಲಾಗಿದೆ. ತುಮಕೂರಿನ ಭೈರಗೊಂಡ್ಲು ಜಲಾಶಯದ ಕಾಮಗಾರಿ ನಡೆಯದೇ ಇರುವುದರಿಂದ ಪ್ರಾಯೋಗಿಕವಾಗಿ ಈ ರೀತಿ ನೀರನ್ನು ಹರಿಸಿ, ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತದೆ ಎಂದರು.

ಎತ್ತಿನಹೊಳೆ ಯೋಜನೆಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಹೊಸ ಭೂಸ್ವಾಧೀನ ಕಾಯ್ದೆ 2013 ರ ಪ್ರಕಾರ ಪ್ರಕ್ರಿಯೆಯನ್ನು ಕೈಗೊಂಡಿದ್ದು ರೈತರಿಗೆ ಹಣವನ್ನು ಪಾವತಿಸಲು ಕ್ರಮ ವಹಿಸಲಾಗುವುದು ಹಾಗೂ ಹಂತ ಹಂತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಯೋಜನೆಗೆ ಆರಂಭಿಕ ಮೊತ್ತ 12,912.36 ಕೋಟಿ ರೂ. ನಿಗದಿಗೊಳಿಸಿದ್ದು, ಎರಡೂ ಹಂತಗಳಲ್ಲಿ ಈವರೆಗೆ ಒಟ್ಟು 7013.3 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಿದರು ಹಾಗೂ ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಆದಷ್ಟು ಶೀಘ್ರವಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

Yettinahole Project 33kms works to be completed shortly Ramesh Jarakiholli2

ಸಣ್ಣ ನೀರಾವರಿ ಸಚಿವರಾದ ಸಿ.ಪಿ. ಯೋಗೇಶ್ವರ್, ಶಾಸಕರಾದ ಕೆ.ಎಂ. ಶಿವಲಿಂಗೆಗೌಡ, ಕೆ.ಎಸ್.ಲಿಂಗೇಶ್ ಹಾಗೂ ಎತ್ತಿನ ಹೊಳೆ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ಲಕ್ಷಣರಾವ್, ಮುಖ್ಯ ಇಂಜಿನಿಯರ್ ಮಾಧವ, ಸೂಪರ್ಡೆಂಟ್ ಇಂಜಿನಿಯರ್ ಶಿವಾರಂ, ಕಾರ್ಯನಿರ್ವಾಹಕ ಇಂಜಿನಿಯರ್ ಶರ್ಮಾ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್.ಕೆ.ಆರ್. ಜೊತೆಯಲ್ಲಿದ್ದರು.

LEAVE A REPLY

Please enter your comment!
Please enter your name here