Home ಉಡುಪಿ Udupi: ಅರಶಿನಗುಂಡಿ ಜಲಪಾತದಲ್ಲಿ ಜಾರಿಬಿದ್ದು ಯುವಕ ಸಾವು

Udupi: ಅರಶಿನಗುಂಡಿ ಜಲಪಾತದಲ್ಲಿ ಜಾರಿಬಿದ್ದು ಯುವಕ ಸಾವು

17
0
Youth died after slipping in Arashinagundi waterfall
Youth died after slipping in Arashinagundi waterfall
Advertisement
bengaluru

ಉಡುಪಿ:

ರೀಲ್ಸ್ ಮಾಡಲು ಹೋಗಿ ಜಾರಿ ಜಲಪಾತಕ್ಕೆ ಬಿದ್ದು ಯುವಕ ನೀರು ಪಾಲಾಗಿದ್ದಾನೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಸೋಮವಾರ ಬೆಳಗ್ಗೆ 11.30ರವರೆಗೂ ಅವರ ಮೃತದೇಹ ಪತ್ತೆಯಾಗಿಲ್ಲ. ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ.

ಯುವಕ ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಶರತ್ ಕುಮಾರ್ ತನ್ನ ಸ್ನೇಹಿತ ಗುರುರಾಜ್ ಜೊತೆ ಜಲಪಾತ ವೀಕ್ಷಣೆಗೆ ಬಂದಿದ್ದರು.

ಶರತ್ ಅವರ ಕುಟುಂಬ ಸದಸ್ಯರು ಸೋಮವಾರ ಕೊಲ್ಲೂರಿಗೆ ಆಗಮಿಸಿದ್ದರು. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

bengaluru bengaluru


bengaluru

LEAVE A REPLY

Please enter your comment!
Please enter your name here