Home Uncategorized YSRCP ಸೇರಿದ ಹತ್ತೇ ದಿನಕ್ಕೆ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ ಅಂಬಟಿ ರಾಯುಡು

YSRCP ಸೇರಿದ ಹತ್ತೇ ದಿನಕ್ಕೆ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ ಅಂಬಟಿ ರಾಯುಡು

15
0

ಹೈದರಾಬಾದ್: ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ತೊರೆಯುವ ನಿರ್ಧಾರವನ್ನು ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಪ್ರಕಟಿಸಿದ್ದಾರೆ. ಅವರು ಡಿಸೆಂಬರ್ 28ರಂದಷ್ಟೆ ಆಂಧ್ರಪ್ರದೇಶದ ಆಡಳಿತಾರೂಢ ಪಕ್ಷವಾದ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವೊಂದನ್ನು ಹಾಕಿರುವ ಅಂಬಟಿ ರಾಯುಡು, ನಾನು ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ತೊರೆಯಲು ಮನಸ್ಸು ಮಾಡಿದ್ದು, ಕೊಂಚ ಕಾಲ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ಮುಂದಿನ ಹೆಜ್ಜೆಯ ಕುರಿತು ಬಹಿರಂಗಪಡಿಸಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

This is to inform everyone that I have decided to quit the YSRCP Party and stay out of politics for a little while. Further action will be conveyed in due course of time.

Thank You.

— ATR (@RayuduAmbati) January 6, 2024

LEAVE A REPLY

Please enter your comment!
Please enter your name here