Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Yuva Nidhi: Shimoga gearing up for cash transfer program | ಯುವನಿಧಿ : ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜು
  • ಬೆಂಗಳೂರು ನಗರ

Yuva Nidhi: Shimoga gearing up for cash transfer program | ಯುವನಿಧಿ : ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜು

The Bengaluru Live January 11, 2024 12:56 PM 1 minute read
Dr. Sharan Prakash Patil

Yuva Nidhi: Shimoga gearing up for cash transfer program | ಯುವನಿಧಿ : ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜು

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಸಿ.ಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಹಲವಾರು ಭಾಗಿ

ಶಿವಮೊಗ್ಗದ ಫ್ರೀಡಂ ಪಾಕ್೯ನಲ್ಲಿ ನಡೆಯುವ ಕಾರ್ಯಕ್ರಮ

1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳ ಭಾಗಿ

ಕಾರ್ಯಕ್ರಮದ ಯಶಸ್ಸಿಗೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವಿರತ ಪ್ರಯತ್ನ

ಬೆಂಗಳೂರು:

ರಾಜ್ಯ ಸರ್ಕಾರದ ಮಹತ್ಷಕಾಂಕ್ಷೆಯ ೫ನೇ ಗ್ಯಾರಂಟಿ ಘೋಷಣೆ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರ ಸಜ್ಜಾಗಿದೆ.

ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಶುಕ್ರವಾರ( ಜ. 12 ) ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗವೇ ಆದ ಫ್ರೀಡಂ ಪಾರ್ಕ್‌( ಹಳೆ ಜೈಲ್‌ ಆವರಣ) ನ ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣವಾಗಿದೆ. ೮೫ ಸಾವಿರಕ್ಕೂ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯ ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರುಗಳಾದ ಮಧುಬಂಗಾರಪ್ಪ, ಡಾ.ಶರಣ ಪ್ರಕಾಶ್ ಪಾಟೀಲ್, ಡಾ.ಎಂ.ಸಿ. ಸುಧಾಕರ್ ಸೇರಿದಂತೆ ಹಲವು ಸಚಿವರು, ಗಣ್ಯರು, ಶಾಸಕರು ಅಧಿಕಾರಿಗಳು ಚಾಲನೆ ಕೊಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೆ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ರಾಷ್ಟೀಯ ಯುವದಿನದ ಶುಭ ಸಂದರ್ಭದಲ್ಲಿ ನಾಳೆ ಶಿವಮೊಗ್ಗದ ಫ್ರೀಡಂ ಪಾರ್ಕ್'ನಲ್ಲಿ ರಾಜ್ಯ ಸರ್ಕಾರವು ಯುವಕರ ಸಬಲೀಕರಣಕ್ಕಾಗಿ 'ಯುವನಿಧಿ' ಯೋಜನೆಯನ್ನು ಜಾರಿಗೊಳಿಸುತ್ತಿದೆ.

ಈ ಯೋಜನೆಗೆ ನೋಂದಾಯಿತರಾದ ಎಲ್ಲಾ ಫಲಾನುಭವಿಗಳಿಗೆ ಇದೇ ತಿಂಗಳಿನಿಂದ ಮಾಸಿಕ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಈಗಲೇ ನೋಂದಾಯಿಸಿ. ಯೋಜನೆಯ ಲಾಭ ಪಡೆಯಿರಿ.… pic.twitter.com/CHCKQxkiec

— Dr. Sharan Prakash Patil (@S_PrakashPatil) January 11, 2024

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಹಾಗೂ ಕಾರ್ಯಕ್ರಮದ ರೂವಾರಿಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು, ಕಾರ್ಯಕ್ರಮಕ್ಕೆ , ಬರುವವರಿಗಾಗಿ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದಾರೆ.

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.

ಪ್ರತಿ ಬಸ್‌ ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದಲ್ಲದೇ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಏನಿದು ಯುವನಿಧಿ ಯೋಜನೆ?

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ.

ನೋಂದಣಿ ಮಾಡುವುದು ಹೇಗೆ?;

  • ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.
  • ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು.
  • 2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು.
  • ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.
  • ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್ನಲ್ಲಿ ಸಲ್ಲಿಸಬಹುದಾಗಿದೆ. ಅರ್ಹರಾಗದೇ ಇರುವವರು ಯಾರು?
  • ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಯೋಜನೆ ಅನ್ವಯಿಸುವುದಿಲ್ಲ.
    ಶಿಷ್ಯ ವೇತನವನ್ನು ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸುವಿದಿಲ್ಲ.
  • ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಅನ್ವಯ ಆಗುವುದಿಲ್ಲ.

ನಮ್ಮದು ನುಡಿದಂತೆ ನಡೆಯುವ ಸರ್ಕಾರ. ವಿಧಾನಸಭಾ ಚುನಾವಣೆಗೂ ಮುನ್ನಾ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳನ್ನು ಅನುಷ್ಟಾನ ಮಾಡಿದ್ದೇವೆ.
ದೇಶದ ಜನತೆ ಕರ್ನಾಟಕ ಮಾದರಿಯ ಆಡಳಿತವನ್ನು ಎದುರು ನೋಡುತ್ತಿದ್ದಾರೆ.

ಡಾ. ಶರಣ್ ಪ್ರಕಾಶ್ ಪಾಟೀಲ್
ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ

About the Author

The Bengaluru Live

Administrator

Visit Website View All Posts

Post navigation

Previous: Karnataka CM extends New Year wishes to Media Fraternity of the state and to their families | ರಾಜ್ಯದ ಪತ್ರಕರ್ತ ಸಮೂಹ ಮತ್ತು ಕುಟುಂಬಕ್ಕೆ ಹೊಸ ವರ್ಷದ ಶುಭ ಕೋರಿದ ಸಿಎಂ
Next: DK Shivakumar responded to more than 3,000 requests, including suspension of officer who asked for bribe to give pension| ನಿವೃತ್ತಿ ವೇತನ ನೀಡಲು ಲಂಚ ಕೇಳಿದ ಅಧಿಕಾರಿ ಅಮಾನತು, ರಾಜಕಾಲುವೆ ಕಾಮಗಾರಿ ಪೂರ್ಣಕ್ಕೆ ಸೂಚನೆ, ಬಿಡಿಎ ನಿವೇಶನಗಳ ಸಮಸ್ಯೆ ಪರಿಹಾರ ಸೇರಿ 3,000 ಕ್ಕೂ ಹೆಚ್ಚು ಮನವಿಗಳಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Related Stories

ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.