Home Uncategorized Zameer Ahmed: ಇನ್ನೂ 10 ದಿನ ಕಾದು ನೋಡಿ: ವಸತಿ ಸಚಿವ ಜಮೀರ್ ಅಹ್ಮದ್ ಹೊಸ...

Zameer Ahmed: ಇನ್ನೂ 10 ದಿನ ಕಾದು ನೋಡಿ: ವಸತಿ ಸಚಿವ ಜಮೀರ್ ಅಹ್ಮದ್ ಹೊಸ ಬಾಂಬ್

70
0

ದಾವಣಗೆರೆ: ದಾವಣಗೆರೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು ವಾರ ಹತ್ತು ದಿನ ಕಾದು ನೋಡಿ ರಾಜ್ಯದಲ್ಲಿ ದೊಡ್ಡ ಬಾಂಬ್ ಬ್ಲಾಸ್ ಆಗುತ್ತೆ ಎಂದು ಮಾಚಿ ಸಚಿವ ರಮೇಶ್ ಜಾರಕಿಹೊಳಿಗೆ ಸಚಿವ ಜಮೀರ್ ಅಹ್ಮದ್ ಟಾಂಗ್ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಸಚಿವ ಜಮೀರ್ ಅಹ್ಮದ್ ಖಾನ್ ಆಪರೇಷನ್ ಕಮಲ ಅಸಾಧ್ಯ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಗಲು ಕನಸು ಕಾಣ್ತಿದ್ದಾರೆ.

56 ಜನ ಎಂಎಲ್‌ಎಗಳನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡೋದು ಸಾಧ್ಯನಾ? ಎಂದು ಪ್ರಶ್ನಿಸಿದರು. ರಮೇಶ್ ಜಾರಕಿಹೊಳಿ ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಹೀಗೆಲ್ಲಾ ಮಾತಾಡ್ತಿದ್ದಾರೆ. ರಮೇಶ್ ಮೊದಲು ಬಿಜೆಪಿಯಲ್ಲಿ ಇರೋ ಶಾಸಕರನ್ನು ಉಳಿಸಿಕೊಳ್ಳಲಿ. ನಂತರ ಕಾಂಗ್ರೆಸ್ ಶಾಸಕರನ್ನು ಕರೆಯಲಿ, ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲು ಒಂದೇ ಕಾಲಿನಲ್ಲಿ ನಿಂತಿದ್ದಾರೆ ಎಂದು ಜಮೀರ್ ಟಾಂಗ್ ನೀಡಿದರು.

 

The post Zameer Ahmed: ಇನ್ನೂ 10 ದಿನ ಕಾದು ನೋಡಿ: ವಸತಿ ಸಚಿವ ಜಮೀರ್ ಅಹ್ಮದ್ ಹೊಸ ಬಾಂಬ್ appeared first on Ain Live News.

LEAVE A REPLY

Please enter your comment!
Please enter your name here