ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿರುವ ಕೊಂಡ್ಲಿ ಕ್ರಾಸ್ (Kondli Cross) ಬಳಿ ಬುಧವಾರ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ (mishap) ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ (head on) ಢಿಕ್ಕಿಯಾದ ನಂತರ ಕಾರಿನಲ್ಲಿದ್ದವರು ಬಲಿಯಾಗಿದ್ದಾರೆ. ಮಡಿದವರ ಗುರುತು ಇದುವರೆಗೆ ಸಿಕ್ಕಿಲ್ಲ. ಗಾಯಗೊಂಡಿರುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
