ನಂದಿನಿ ಹಾಲಿನ ದರ ಹೆಚ್ಚಿಸುವ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸುವ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕೆಎಂಎಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರ್ ಗೆ ಐದು ರೂಪಾಯಿ ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಿದೆ ಎಂದು ಕಿಡಿಕಾರಿದೆ.
ಇದನ್ನೂ ಓದಿ: ಕೆಎಂಎಫ್ ನೂತನ ಅಧ್ಯಕ್ಷರಾಗಿ ಭೀಮಾ ನಾಯಕ್ ಅವಿರೋಧ ಆಯ್ಕೆ; ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಮನವಿ!
ಸಿದ್ದರಾಮಯ್ಯ ಅವರ ಎಟಿಎಂ ಸರ್ಕಾರದಲ್ಲಿ ಈಗಾಗಲೇ ದಿನ ಬಳಕೆ ಸಾಮಾಗ್ರಿಗಳ ಬೆಲೆ ಗಗನಕ್ಕೇರಿದೆ. ಇದೀಗ ಹಾಲಿನ ದರವನ್ನೂ ಏರಿಸುವ ಮೂಲಕ ರಾಜ್ಯದ ಬಡ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದೆ. ಅಲ್ಲದೇ, ಈ ಜನದ್ರೋಹಿ ನಿರ್ಧಾರದಿಂದ ಸರ್ಕಾರ ದೂರ ಉಳಿಯಬೇಕೆಂದು ಬಿಜೆಪಿ ಆಗ್ರಹಿಸಿದೆ.
ಕೆಎಂಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರಿಗೆ ₹5 ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ ಹಾಕಿದೆ. @siddaramaiah ರವರ #ATMSarkara ದಲ್ಲಿ ಈಗಾಗಲೇ ದಿನ ಬಳಕೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಇದೀಗ ಹಾಲಿನ ದರವನ್ನೂ ಏರಿಸುವ ಮೂಲಕ ರಾಜ್ಯದ ಬಡ ಜನರ ಮೇಲೆ ಬರೆ ಎಳೆಯುತ್ತಿದೆ.
ಈ ಜನದ್ರೋಹಿ… pic.twitter.com/9tdroD2qQz
— BJP Karnataka (@BJP4Karnataka) June 22, 2023
